ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲನಾ ದೋಷ: ಅಪಘಾತ ಹೆಚ್ಚು

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ನೆಲಮಂಗಲ: ವಾಹನಗಳ ತಾಂತ್ರಿಕ ದೋಷಕ್ಕಿಂತ ಚಾಲನಾ ದೋಷಗಳಿಂದಲೇ ಹೆಚ್ಚು ಸಂದರ್ಭದಲ್ಲಿ ಅಪಘಾತಗಳು ಸಂಭವಿಸುತ್ತವೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಹಿರಿಯ ಅಧಿಕಾರಿ ಡಾ.ಸಿ.ಟಿ.ಮೂರ್ತಿ ತಿಳಿಸಿದರು.

ಇಲಾಖೆಯ ನೆಲಮಂಗಲ ವಿಭಾಗವು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಶಾಲಾ ವಾಹನ ಚಾಲಕರಿಗೆ ಏರ್ಪಡಿಸಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ವಾಹನ ಚಾಲಕರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಆರ್‌ಟಿಒ ಹಿರಿಯ ಅಧಿಕಾರಿ ಅಶೋಕ್ ಕುಮಾರ್, ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚಾಲನೆ ಸಂದರ್ಭದಲ್ಲಿ ಸಾಕಷ್ಟು ಎಚ್ಚರ ವಹಿಸಬೇಕು~ ಎಂದು ಹೇಳಿದರು.

ಅಧಿಕಾರಿಗಳಾದ ಸೋಮಶೇಖರ್, ನಂದಕುಮಾರ್, ನರಸಿಂಹಮೂರ್ತಿ, ಕೆ.ಟಿ. ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಮಂಜುನಾಥ್ ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT