ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕ ಕುಟುಂಬದಿಂದ ಸಮೃದ್ಧಿ

Last Updated 12 ಜುಲೈ 2012, 9:20 IST
ಅಕ್ಷರ ಗಾತ್ರ

ಕೊಪ್ಪಳ: ಜನಸಂಖ್ಯೆ ಹೆಚ್ಚಳದಿಂದ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ, ಆಹಾರ, ವಸತಿ, ನೀರಿನ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಣ್ಣ ಕುಟುಂಬ ವ್ಯವಸ್ಥೆಯಿಂದ ಸವೃದ್ಧಿ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಾದೇವ ಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಮಖ್ಯಾ ಹಾಗೂ ಗೃಹ ರಕ್ಷಕ ದಳದ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ, ಜನಸಂಖ್ಯಾ ಸ್ಫೋಟದಿಂದಾಗಿ ನಿರೀಕ್ಷಿತ ಯಶಸ್ಸು ಸಿಗುತ್ತಿಲ್ಲ. ಗ್ರಾಮೀಣ ಪ್ರದೇಶದ ಜನರಲ್ಲಿ ಮನೆ ಮಾಡಿರುವ ಮೂಢ ನಂಬಿಕೆ, ಅನಕ್ಷರತೆ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳ ಯಶಸ್ಸಿಗೆ ಅಡ್ಡಿಯುಂಟು ಮಾಡಿವೆ ಎಂದರು.
ಜನಸಂಖ್ಯಾ ಸ್ಫೋಟದಿಂದಾಗುವ ದುಷ್ಪರಿಣಾಮ ಹಾಗೂ ಪರಿಹಾರ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಶಿವಾನಂದ ಕಡಪಟ್ಟಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ರಾಜೂರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ., ಜಿಲ್ಲಾ ಉದ್ಯೋಗಾಧಿಕಾರಿ ಬಿ.ಎಫ್.ಬೀರನಾಯ್ಕರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶರಣಪ್ಪ ನಾಯಕ್ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಸ್.ಮಾದರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಸಮಾರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಜನ ಜಾಗೃತಿ ರ‌್ಯಾಲಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT