ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಕಲಾ ಶಾಲೆಗಳಿಗೆ ಪ್ರತ್ಯೇಕ ವಿವಿ

Last Updated 6 ಜನವರಿ 2011, 9:00 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಚಿತ್ರಕಲಾ ಶಾಲೆಗಳ ಕಡಿವಾಣಕ್ಕೆ ಚಿತ್ರಕಲಾ ಶಾಲೆಗಳಿಗೂ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸುವ ಅಗತ್ಯವಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್.ಮುರಿಗೆಪ್ಪ ಅಭಿಪ್ರಾಯಪಟ್ಟರು. ನಗರದ ರವಿವರ್ಮ ಚಿತ್ರಕಲಾ ಶಾಲೆಯು ಅರಮನೆ ಆವರಣದ ಬಿಡದಿ ಹಾಲ್‌ನಲ್ಲಿ ಬುಧವಾರ ಆಯೋಜಿಸಿದ್ದ ಸೃಜನಶೀಲ ಚಿತ್ರಕಲಾ ಪ್ರದರ್ಶನದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿರುವ ಹಲವಾರು ಚಿತ್ರಕಲಾ ಶಾಲೆಗಳು ಬಹಳಷ್ಟು ಸಂಕಷ್ಟದ ಸ್ಥಿತಿಯಲ್ಲಿವೆ. ಅವುಗಳನ್ನು ಕಲಾ ಶಾಲೆ ಎಂದು ಕರೆಯಲಾಗುತ್ತಿದೆಯೇ ಹೊರತು ಕಲಾ ಮಹಾವಿದ್ಯಾಲಯ ಎಂದು ಕರೆಯುತ್ತಿಲ್ಲ. ಅಲ್ಲದೆ, ಚಿತ್ರಕಲಾ ಶಾಲೆಗಳು ಅಗತ್ಯ ಮೂಲಸೌಲಭ್ಯಗಳಿಂದ ವಂಚಿತವಾಗಿ, ಬಾಡಿಗೆ ಕಟ್ಟಡದಲ್ಲಿ ತರಗತಿಗಳನ್ನು ನಡೆಸುತ್ತಿವೆ. ಈ ಕುರಿತು ಶಾಲಾ ಆಡಳಿತ ಮಂಡಳಿ ಹಾಗೂ ವಿಶ್ವವಿದ್ಯಾನಿಲಯಗಳು ಗಮನ ಹರಿಸುತ್ತಿಲ್ಲ.
 

ಈ ಹಿನ್ನೆಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮತ್ತು ಮೂಲಸೌಕರ್ಯ ಕಲ್ಪಿಸಲು ಚಿತ್ರಕಲಾ ಶಾಲೆಗಳಿಗೆ ಪ್ರತ್ಯೇಕ ವಿವಿ ಸ್ಥಾಪಿಸುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು. ‘ಕಲೆ ಒಂದು ಅಭಿವ್ಯಕ್ತಿ ಮಾಧ್ಯಮ. ಕಲಾವಿದ ತನ್ನೊಳಗಿನ ತುಡಿತಗಳನ್ನು ಅನುಕೂಲಕರ ಮಾಧ್ಯಮದ ಮೂಲಕ ಅಭಿವ್ಯಕ್ತಿ ಪಡಿಸುತ್ತಾನೆ. ಅದೇ ರೀತಿ, ಸಾಹಿತಿಯಾದವನು ಕತೆ, ಕಾದಂಬರಿ, ಕವನಗಳ ಮೂಲಕ ಅಭಿವ್ಯಕ್ತಿ ಪಡಿಸುತ್ತಾನೆ. ಇಲ್ಲಿ ಹಲವಾರು ಬಣ್ಣಗಳ ಮೇಳೈಕೆಯಿಂದ ಬೇರೆ, ಬೇರೆ ಅರ್ಥಗಳಿರುವ ಚಿತ್ರಗಳು ಹೊರಹೊಮ್ಮುತ್ತವೆ. ಚಿತ್ರಗಳನ್ನು ನೋಡಿದರೆ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT