ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಗಟ್ಟಿ ಕಳ್ಳಸಾಗಣೆ: 8 ಜನರ ಸೆರೆ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಶ್ರೀಲಂಕಾದಿಂದ ಚಿನ್ನದ ಗಟ್ಟಿ ಮತ್ತು ಆಭರಣಗಳನ್ನು ಕಳ್ಳಸಾಗಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ ಎಂಟು ಮಂದಿಯನ್ನು ಡಿಪಾರ್ಟ್‌ಮೆಂಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎಎಲ್) ಬಂಧಿಸಿದ್ದಾರೆ.

`ಶ್ರೀಲಂಕಾ ಮತ್ತು ಭಾರತೀಯ ಮೂಲದ ವೃತ್ತಿಪರ ಅಪರಾಧಿಗಳು, ಎರಡು ಗುಂಪುಗಳಾಗಿ ಶ್ರೀಲಂಕಾದ ಯುಎಲ್-171 ವಿಮಾನದಲ್ಲಿ ನಗರಕ್ಕೆ ಬರುತ್ತಿದ್ದಾರೆ. ಅವರು ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿರುವ ಬಗ್ಗೆ ಅನುಮಾನವಿದೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂತು. ಆ ಮಾಹಿತಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು~ ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

`ಆರೋಪಿಗಳು 50 ಚಿನ್ನದ ಗಟ್ಟಿಗಳನ್ನು ದೇಹದಲ್ಲಿಟ್ಟುಕೊಂಡು ನಗರಕ್ಕೆ ಬಂದಿದ್ದರು. ಅವರನ್ನು ಸೋಮವಾರ ವಶಕ್ಕೆ ಪಡೆದು ಲೋಹ ಶೋಧದಿಂದ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು.

ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈ ಕಳ್ಳಸಾಗಣೆಯ ಪ್ರಮುಖ ರುವಾರಿ ಚೆನ್ನೈನಲ್ಲಿರುವುದು ಗೊತ್ತಾಯಿತು. ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ~ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT