ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಭಾರಿ ಮಳೆ, ಪ್ರವಾಹ: 14 ಸಾವು- 11 ಮಂದಿ ಕಣ್ಮರೆ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೀಜಿಂಗ್ (ಪಿಟಿಐ): ಚೀನಾದ ನೈಋತ್ಯ ಭಾಗದಲ್ಲಿ ಭಾರಿ ಮಳೆ ಮತ್ತು ಪ್ರವಾಹದ ಕಾರಣ 14 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಕಣ್ಮರೆ ಆಗಿದ್ದು, ನೆರೆ ಹಾವಳಿಯಿಂದ 30 ಲಕ್ಷಕ್ಕೂ ಹೆಚ್ಚು ಜನರು ತತ್ತರಿಸಿದ್ದಾರೆ ಎಂದು ಸಿಚುವಾನ್ ಪ್ರಾಂತ್ಯದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಿಚುವಾನ್ ಪ್ರಾಂತ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16,700 ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗೆ ಹಾನಿಯಾಗಿದೆ. 31 ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಒಟ್ಟಾರೆ ಆರು ನೂರು ಕೋಟಿ ಯುವಾನ್‌ಗಳಷ್ಟು (93.75 ಕೋಟಿ ಡಾಲರ್) ನಷ್ಟ ಉಂಟಾಗಿದೆ ಎಂದು `ಕ್ಸಿನ್‌ಹುವಾ~ ಪತ್ರಿಕೆ ವರದಿ ಮಾಡಿದೆ.

ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯ ಪಡೆಯು ತನ್ನ ವಿಶೇಷ ತಂಡವನ್ನು ನೆರೆ ಪೀಡಿತ ಪ್ರದೇಶಕ್ಕೆ ರವಾನಿಸಿದೆ. ಪ್ರವಾಹದಲ್ಲಿ ಸಿಲುಕಿದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುತ್ತಿದೆ.

ಚೀನಾದಲ್ಲಿ 1847ರ ನಂತರ ದೊಡ್ಡ ಮಟ್ಟದಲ್ಲಿ ಉಂಟಾದ ಪ್ರವಾಹ ಇದಾಗಿದೆ ಎಂದು `ಕ್ಸಿನ್‌ಹುವಾ~ ಪತ್ರಿಕೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT