ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲೂ ಅನ್ನಭಾಗ್ಯ, ಕ್ಷೀರಭಾಗ್ಯ ಪ್ರತಿಧ್ವನಿ

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಚೀನಾದ ಡಾಲಿಯನ್‌­ನಲ್ಲಿ ವಿಶ್ವ ಆರ್ಥಿಕ ವೇದಿಕೆ ವತಿಯಿಂದ ಶುಕ್ರವಾರ  ನಡೆದ ಆಹಾರ ಭದ್ರತೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವ­ಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾರಿಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಗಳ ಮಹತ್ವದ ಬಗ್ಗೆ ವಿವರಿಸಿದರು.

ಒಂದು ರೂಪಾಯಿಗೆ ಒಂದು ಕೆ.ಜಿ ಯಂತೆ ಪ್ರತಿ ಕುಟುಂಬಕ್ಕೆ ಗರಿಷ್ಠ 30 ಕೆ.ಜಿ ಅಕ್ಕಿ ನೀಡುವ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಈಚೆಗೆ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊ­ಳಿಸಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಗಿದ್ದು, ಆಹಾರ ಧಾನ್ಯಗಳ ದಾಸ್ತಾನಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಇರುವುದನ್ನು ಮನಗಂಡು ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.

2020ರ ವೇಳೆಗೆ 300 ದಶಲಕ್ಷ ಟನ್‌ ಆಹಾರದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಮಾಹಿತಿ ತಂತ್ರಜ್ಞಾನದ ಸದು­ಪಯೋಗ ಪಡೆದುಕೊಂಡು ತುಂತುರು ನೀರಾವರಿ, ಜಲಾನಯನ ಅಭಿವೃದ್ಧಿ, ಸಮಗ್ರ ಕೃಷಿಗೆ ಆದ್ಯತೆ ನೀಡುವ ಅವಶ್ಯಕತೆ ಇದೆ ಎಂದರು.

ಆಹಾರ ಭದ್ರತಾ ಯೋಜನೆಯನ್ನು ಜಾರಿಗೊಳಿಸಿರುವುದರಿಂದ ಬಡವರಿಗೆ ಅನುಕೂಲವಾಗಲಿದೆ. ಅಲ್ಲದೆ ಅವರ ಆದಾಯದ ಸ್ವಲ್ಪ ಭಾಗವನ್ನು ಮಕ್ಕಳ ಶಿಕ್ಷಣಕ್ಕೆ ವೆಚ್ಚ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT