ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗದ ಕ್ರಮ: ಭೋಜನ ಕೂಟಕ್ಕೆ ನಿರ್ಬಂಧ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಚುನಾವಣಾ ವೆಚ್ಚದ ಮೇಲೆ ಇನ್ನಷ್ಟು ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಸಮುದಾಯವರಿಗೆ ಅಥವಾ ಮತದಾರರಿಗೆ ಭೋಜನ ಕೂಟ ಏರ್ಪಡಿಸುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ.

ಆಯೋಗದ ಈ ಆದೇಶ ತತ್‌ಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಇದೇ 13ರಂದು ನಡೆಯಲಿರುವ ಹಿಸ್ಸಾರ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಹರಿಯಾಣ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಲಾಗಿದೆ.

ಉತ್ತರ ಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗಳಲ್ಲೂ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಓಲೈಸಲು ಏರ್ಪಡಿಸಲಾಗುವ ಭೋಜನ ಕೂಟಗಳನ್ನು ಅಭ್ಯರ್ಥಿಯ ಚುನಾವಣಾ ವೆಚ್ಚವೆಂದೇ ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT