ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ'

ಕೋಮು ಸೌಹಾರ್ದ ವೇದಿಕೆ ಆರೋಪ
Last Updated 26 ಏಪ್ರಿಲ್ 2013, 9:51 IST
ಅಕ್ಷರ ಗಾತ್ರ

ಮಂಗಳೂರು: `ಇತ್ತೀಚೆಗೆ ನಗರದ ಕೇಂದ್ರ ಮೈದಾನದಲ್ಲಿ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ರಾಜಕಾರಣಿಗಳು ಭಾಗವಹಿಸಿದ್ದು, ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಕೋಮು ಸೌಹಾರ್ದ ವೇದಿಕೆ ಜಿಲ್ಲಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು `ಮಿಲಾಗ್ರಿಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆಯ ಕಾರಣ ನೀಡಿ ಮುಂದೂಡಲಾಗಿತ್ತು. ಒಂದು ಧರ್ಮದ ಮತದಾರರನ್ನು ಪ್ರಭಾವಿಸುವ ರಾಜಕೀಯ ದುರುದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಅನುಷ್ಠಾನದಲ್ಲಿ ಈ ದ್ವಂದ್ವ ನಿಲುವನ್ನು ಕೋಮು ಸೌಹಾರ್ದ ವೇದಿಕೆ ಖಂಡಿಸುತ್ತದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು' ಎಂದರು.ಸುದ್ದಿಗೋಷ್ಠಿಯಲ್ಲಿ ಪಿ.ಬಿ ಡೆಸಾ, ಇಸ್ಮತ್ ಪಜೀರ್, ಸಾರಾ ಅಬೂಬಕ್ಕರ್‌ಕೃಷ್ಣ ಶಾಸ್ತ್ರಿ ಬಾಳಿಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT