ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಎಡಗೈ ಉಂಗುರ ಬೆರಳಿಗೆ ಶಾಯಿ

Last Updated 18 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಈ ಬಾರಿ ಎಡಗೈನ ತೋರುಬೆರಳು ಬದಲಿಗೆ, ಉಂಗುರ ಬೆರಳಿಗೆ ಶಾಯಿ (ಮಸಿ) ಹಾಕಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯದಲ್ಲಿನ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್ 7ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಎಡಗೈನ ತೋರುಬೆರಳಿಗೆ ಶಾಯಿ ಹಾಕಲಾಗಿತ್ತು. ಅದು ಇನ್ನೂ ಮಾಸದ ಕಾರಣ, ಈ ಬಾರಿ ಉಂಗುರಬೆರಳಿಗೆ ಶಾಯಿ ಹಾಕಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ ಎಂದು ರಾಜ್ಯದ ಜಂಟಿ ಚುನಾವಣಾಧಿಕಾರಿ ಟಿ.ಶಾಮಯ್ಯ `ಪ್ರಜಾವಾಣಿ'ಗೆ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಗೈ ತೋರುಬೆರಳಿಗೆ ಹಾಕಿರುವ ಶಾಯಿ ಅಳಿಸದೆ ಇರುವುದರಿಂದ, ಗೊಂದಲಕ್ಕೆ ಅವಕಾಶ ಆಗಬಾರದು ಎಂಬ ಉದ್ದೇಶದಿಂದ ವಿಧಾನಸಭಾ ಚುನಾವಣೆಗೆ ಈ ಬದಲಾವಣೆ ಮಾಡಲಾಗಿದೆ. ಆಯೋಗದ ತೀರ್ಮಾನವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT