ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಎದುರಿಸಲು ಸಜ್ಜಾಗಿ

Last Updated 11 ಫೆಬ್ರುವರಿ 2012, 9:20 IST
ಅಕ್ಷರ ಗಾತ್ರ

ಕೋಲಾರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಶುರುವಾಗಿದೆ. ಸರ್ಕಾರದ ಪತನ ಸನ್ನಿಹಿತವಾಗಿದೆ. ವೇಮಗಲ್ ಉಪಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಿದಂತೆಯೇ ಇನ್ನು ಮುಂದೆಯೂ ಮುಖಂಡರು, ಕಾರ್ಯಕರ್ತರು ಕೆಲಸ ಮಾಡಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ನುಡಿದರು.

ಇತ್ತೀಚೆಗೆ ತಮ್ಮ ಮನೆಯಲ್ಲಿ ಏರ್ಪಡಿಸಿದ್ದ ನರಸಾಪುರ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಜೆಡಿಎಸ್‌ಗೆ ಒಳ್ಳೆಯ ವಾತಾವರಣವಿದೆ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವ ಅವಕಾಶವಿದೆ. ಪಕ್ಷದ ಕಾರ್ಯಕರ್ತರು ಒಮ್ಮನಸ್ಸಿನಿಂದ ಕೆಲಸ ಮಾಡಬೇಕು. ಮುನಿದು ಕೊಂಡು ಪಕ್ಷದಿಂದ ದೂರಾಗಿರುವವರನ್ನು ಪಕ್ಷಕ್ಕೆ ಕರೆತರಬೇಕು ಎಂದರು.

ರಾಜ್ಯದಲ್ಲಿ ಸರ್ಕಾರ ಅಭದ್ರಗೊಂಡಿದೆ. ಬಿಜೆಪಿ ಯಲ್ಲೇ ಭಿನ್ನಮತ ಆರಂಭವಾಗಿರುವುದರಿಂದ ಸರ್ಕಾರಕ್ಕೆ ಉಳಿಗಾಲವಿಲ್ಲ. ಚುನಾವಣೆಯನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಸಿದ್ಧ ರಾಗಬೇಕು. ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ನಿಂತರೆ ವೇಮಗಲ್ ಚುನಾವಣೆಯಲ್ಲಿ ಜಯ ಪಡೆದಂತೆ ಇಲ್ಲಿಯೂ ಜಯಗಳಿಸಬಹುದು. ದೂರವಾಗಿರುವ ದಿ. ಸಿ.ಬೈರೇಗೌಡರ ಬೆಂಬಲಿಗರು ಪಕ್ಷಕ್ಕೆ ಮರಳಬೇಕು ಎಂದು ಮನವಿ ಮಾಡಿದರು.

ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ನಮ್ಮ ಬೆಂಬಲಿಗರು ಹೆಚ್ಚಾಗಿರುವ ಕಡೆ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಹಿಂದೇಟು ಹಾಕುತ್ತಿದ್ದಾರೆ. ಇಲ್ಲೂ ರಾಜಕೀಯ ಬುದ್ಧಿ ತೋರಿಸುವ ಇಂತಹವರಿಗೆ ಮುಂದೆ ಸರಿಯಾದ ಪಾಠ ಕಲಿಸಬೇಕು ಎಂದು ಕೋರಿದರು.

ಶೀಘ್ರದಲ್ಲೇ ಪ್ರತಿ ಮನೆಗೆ ತೆರಳಿ ಕಾರ್ಯಕರ್ತರ ಅನಿಸಿಕೆ ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಆಧಾರದ ಮೇಲೆ ಪಕ್ಷದ ಸಂಘಟನೆ ಮಾಡ ಲಾಗುವುದು ಎಂದು ತಿಳಿಸಿದರು. 

 ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲ್, ಕಲ್ಕೆರೆ ಮಂಜುನಾಥ್, ವಾನರಾಶಪ್ಪ, ಎಂಟಿಬಿ ಶ್ರೀನಿವಾಸ್, ಹರೀಶ್‌ಗೌಡ, ಪ್ರಾಣೇಶ್ವರರಾವ್, ಸೋಮಣ್ಣ, ವಕೀಲ ಶ್ರೀನಿವಾಸ್, ಪಾಪಣ್ಣ, ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT