ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಫಲಿತಾಂಶ ತೀರ್ಪಿಗೆ ಬದ್ಧ

Last Updated 4 ಫೆಬ್ರುವರಿ 2011, 17:10 IST
ಅಕ್ಷರ ಗಾತ್ರ

ಬೆಂಗಳೂರು:  ರಾಜ್ಯದಲ್ಲಿನ ಎಲ್ಲ ತಾಲ್ಲೂಕು ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿರುವ ಹೈಕೋರ್ಟ್, ಚುನಾವಣೆಯ ಫಲಿತಾಂಶ ಮಾತ್ರ ತನ್ನ ಅಂತಿಮ ಆದೇಶಕ್ಕೆ ಬದ್ಧವಾಗಿರಬೇಕು ಎಂದು ಶುಕ್ರವಾರ ಸೂಚಿಸಿದೆ.

ಇದೇ ವೇಳೆ ರಾಜ್ಯದಲ್ಲಿನ 176 ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ನೀಡಿರುವ ಪಟ್ಟಿಯನ್ನು ಇದೇ ಸೋಮವಾರ ಹಾಜರು ಪಡಿಸುವಂತೆ ಸರ್ಕಾರಕ್ಕೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಮಾಡಿ ಜ.29ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಿರುವ ನ್ಯಾಯಮೂರ್ತಿಗಳು ಮೇಲಿನಂತೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT