ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ ಮುಖ್ಯಮಂತ್ರಿಯಾಗಿ ರಮಣ್‌ ಸಿಂಗ್‌ ಪ್ರಮಾಣ

Last Updated 12 ಡಿಸೆಂಬರ್ 2013, 19:43 IST
ಅಕ್ಷರ ಗಾತ್ರ

ರಾಯ್‌ಪುರ (ಪಿಟಿಐ): ಸತತ ಮೂರನೇ ಬಾರಿಗೆ ಛತ್ತೀಸಗಡ ಮುಖ್ಯಮಂತ್ರಿಯಾಗಿ ಡಾ.ರಮಣ್‌ ಸಿಂಗ್‌ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಶೇಖರ್‌ ದತ್‌ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್‌ ಸಿಂಗ್‌, ಪಕ್ಷದ ಹಿರಿಯ ನಾಯಕರಾದ ಎಲ್‌.ಕೆ. ಆಡ್ವಾಣಿ, ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್‌, ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್‌ ಜೇಟ್ಲಿ, ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌  ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 49 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ರಮಣ್‌ ಸಿಂಗ್‌ ಬಿಜೆಪಿಯ ಹ್ಯಾಟ್ರಿಕ್‌ ಮುಖ್ಯಮಂತ್ರಿಗಳ ಗುಂಪಿಗೆ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT