ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 29ರಂದು ಬಿವಿಎಸ್ ದಶಮಾನೋತ್ಸವ

Last Updated 23 ಜನವರಿ 2012, 7:40 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಜನವರಿ 29ರ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಬಹುಜನ ವಿದ್ಯಾರ್ಥಿ ಸಂಘದ ದಶಮಾನೋತ್ಸವ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಸುಮಾರು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇಗೌಡನಹಳ್ಳಿ ಹನುಮಂತರಾಜು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಹಾಗೂ ಬಹುಜನ ವಿದ್ಯಾರ್ಥಿ ಸಂಘ ಸ್ಥಾಪನೆಯಾಗಿ 10 ವರ್ಷಗಳು ಕಳೆದಿದ್ದು, ಈ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ವೈಚಾರಿಕವಾಗಿ, ಸಾಂಸ್ಕೃತಿಕವಾಗಿ ಜಾಗೃತಿಯನ್ನು ಮೂಡಿಸಿ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.
 
ಈ ಸಂತಸದ ಕ್ಷಣವನ್ನು ಹಂಚಿಕೊಳ್ಳಲು ತಾಲ್ಲೂಕಿನ ಬಹುಜನ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಎಲ್ಲ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT