ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಟಿ ಅಧಿವೇಶನ: ರಾಜ್ಯಪಾಲರಿಗೆ ಆಹ್ವಾನ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶನಿವಾರ ಬೆಳಿಗ್ಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ ಇದೇ 30ರಂದು ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಅಧಿಕೃತ ಆಹ್ವಾನ ನೀಡಿದರು.

ಸುಮಾರು ಅರ್ಧ ಗಂಟೆ ಕಾಲ ರಾಜ್ಯಪಾಲರ ಜತೆ ಇದ್ದ ಅವರು, ಕಾನೂನು-ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, `ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಿದ್ದು ಬಿಟ್ಟರೆ, ಬೇರೆ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಿಲ್ಲ~ ಎಂದು ಹೇಳಿದರು.

`ಬಿಜೆಪಿಯಲ್ಲಿನ ಒಗ್ಗಟ್ಟು ಸಹಿಸದ ಪ್ರತಿಪಕ್ಷಗಳ ಕೆಲವು ಮುಖಂಡರು ನಮ್ಮ ನಾಯಕರಿಗೆ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ~ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸಂಸದ ಎಚ್.ವಿಶ್ವನಾಥ್ ಅವರನ್ನು ಛೇಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT