ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಟಿ ಅಧಿವೇಶನ: ರಾಜ್ಯಪಾಲರಿಗೆ ಸದ್ಯದಲ್ಲೇ ಅಧಿಕೃತ ಆಹ್ವಾನ

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶನಿವಾರ ಇಲ್ಲಿ ಹೇಳಿದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ, ಸಣ್ಣ ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಇತರ ಕೆಲ ಇಲಾಖೆಗಳ ಪ್ರಗತಿ ಪರಿಶೀಲನೆ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಇದೇ 9ರಂದು ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು. ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿದ ನಂತರ ಬಜೆಟ್ ತಯಾರಿಗೆ ಕೈಹಾಕಲಾಗುವುದು ಎಂದು ಹೇಳಿದರು.
 
ಸದ್ಯಕ್ಕೆ ಐದಾರು ಜಿಲ್ಲೆಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಉಳಿದಂತೆ ಎಲ್ಲಿಯೂ ಇಲ್ಲ. ತುಮಕೂರು, ಕೋಲಾರ ಸೇರಿದಂತೆ ಇತರ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಶಾಶ್ವತ ಪರಿಹಾರಕ್ಕೆ ಪ್ರಯತ್ನಗಳು ಸಾಗಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT