ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತೆಗೆ ಸ್ಪಷ್ಟ ಉತ್ತರ ನೀಡಿ: ಕಾಂಗ್ರೆಸ್

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಈ ಸಾಲಿನ ಬಜೆಟ್‌ನಲ್ಲಿ ವಿವಿಧ ವಲಯಗಳಿಗೆ ಮೀಸಲಿಟ್ಟಿರುವ ಹಣದಲ್ಲಿ ಶೇಕಡ 60ರಷ್ಟನ್ನೂ ಸರ್ಕಾರ ಬಳಸಿಕೊಂಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಕುರಿತು ಜನತೆಗೆ ಸ್ಪಷ್ಟ ಉತ್ತರ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಒತ್ತಾಯಿಸಿದೆ.

`ಪ್ರಸಕ್ತ ಸಾಲಿನಲ್ಲಿ 66 ಸಾವಿರ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಲಾಗಿತ್ತು. ವಿವಿಧ ವಲಯಗಳಿಗೆ ನೀಡಿರುವ ಹಣವನ್ನು ಸೂಕ್ತವಾಗಿ ಬಳಸಿಕೊಂಡಿದ್ದರೆ ಈ ವೇಳೆಗೆ ಶೇಕಡ 80ರಷ್ಟು ಹಣ ಖರ್ಚಾಗಿರುತ್ತಿತ್ತು.
ಮಾರ್ಚ್‌ನಲ್ಲಿ ಮುಂದಿನ ಸಾಲಿನ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ. ಅದಕ್ಕೂ ಮುನ್ನ ಈ ಸಾಲಿನಲ್ಲಿ ಒದಗಿಸಿ ರುವ ಹಣವನ್ನು ಹೇಗೆ ಖರ್ಚು ಮಾಡಲಾಗಿದೆ  ಎನ್ನುವು ದನ್ನು ಅವರು ತಿಳಿಸಬೇಕು~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಒತ್ತಾಯಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, `ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ, ನೀರಾವರಿ, ಇಂಧನ ಮತ್ತು ಗ್ರಾಮೀಣಾಭಿವೃದ್ಧಿಗೆ ಕ್ರಮವಾಗಿ ರೂ 3,180 ಕೋಟಿ, 12,284 ಕೋಟಿ, 7,800 ಕೋಟಿ, 8,523 ಕೋಟಿ ಮತ್ತು 4,375 ಕೋಟಿ ನೀಡಲಾಗಿತ್ತು. ಆದರೆ ಈ ಕ್ಷೇತ್ರಗಳಲ್ಲಿ ಆಗಿರುವ ಅಭಿವೃದ್ಧಿ ಏನು? ಬೆಳೆ ಹಾನಿಯಿಂದ ತೊಂದರೆಗೆ ಒಳಗಾಗಿರುವ ರೈತರಿಗೆ ಸರ್ಕಾರ ಎಷ್ಟು ನೆರವು ಒದಗಿಸಿದೆ~ ಎಂದು ಪ್ರಶ್ನಿಸಿದರು.

ಸಮಿತಿ ರಚನೆ: ಸದಾನಂದ ಗೌಡ ರಾಜೀನಾಮೆಯಿಂದ ತೆರವಾಗಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಯಾವುದೇ ಸಂದರ್ಭದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಅಲ್ಲಿಗೆ ಸೂಕ್ತ ಅಭ್ಯರ್ಥಿಯನ್ನು ಹುಡುಕಲು ಪಕ್ಷದ ಮುಖಂಡರಾದ ಎಚ್.ಕೆ. ಪಾಟೀಲ್, ರೋಷನ್ ಬೇಗ್, ವಿ.ಆರ್. ಸುದರ್ಶನ್  ಮತ್ತು ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಇವರು ಕ್ಷೇತ್ರದ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ವಾರದಲ್ಲಿ ಸಲ್ಲಿಸುತ್ತಾರೆ ಎಂದು ತಿಳಿಸಿದರು.

ಜಿಲ್ಲಾ ಪ್ರವಾಸ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದ ಅವರು, `ಚುನಾವಣಾ ಸಿದ್ಧತೆಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ, ಮುಖಂಡರಾದ ಸಿದ್ದರಾಮಯ್ಯ, ಮೋಟಮ್ಮ ಮತ್ತು ನಾನು ಇದೇ 9ರಿಂದ 12ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದೇವೆ~ ಎಂದು ಹೇಳಿದರು. ಮುಂದಿನ ವಿಧಾನಸಭಾ ಚುನಾವಣೆಗೆ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT