ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಜನರ ನಿಧಿಯಿಂದ ಜನರಿಗಾಗಿ ಸ್ಪರ್ಧೆ'

Last Updated 23 ಏಪ್ರಿಲ್ 2013, 8:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: `ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ಕೆಲವೇ ಕಡೆ ಸ್ಪರ್ಧಿಸಿದ್ದರೂ ಉತ್ತಮ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗುಲ್ಬರ್ಗಾದಲ್ಲಿ ಮಾರುತಿ ಮಾನ್ಪಡೆ, ಬಾಗೇಪಲ್ಲಿಯಲ್ಲಿ ಜಿ.ವಿ.ಶ್ರೀರಾಮರೆಡ್ಡಿಯವರು ಸಿಪಿಎಂ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದು, ಇವರಿಬ್ಬರ ಪರ ಜನರು ಒಲವು ತೋರುತ್ತಾರೆ ಎಂಬ ವಿಶ್ವಾಸವಿದೆ' ಎಂದು ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯ ಎಂ.ಎ.ಬೇಬಿ ತಿಳಿಸಿದರು.

ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸ ಕೈಗೊಂಡಿರುವ ಅವರು ಸೋಮವಾರ ಬಾಗೇಪಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ `ಪ್ರಜಾವಾಣಿ'ಯೊಂದಿಗೆ ಮಾತನಾಡಿ, `ಸಿಪಿಎಂ ಮತ್ತು ಎಡಪಕ್ಷಗಳು ಹೊರತುಪಡಿಸಿ, ಇತರ ಎಲ್ಲ ಪಕ್ಷಗಳು ಮತ್ತು ರಾಜಕೀಯ ಮುಖಂಡರು ಒಂದಿಲ್ಲೊಂದು ಆರೋಪಗಳನ್ನು ಎದುರಿಸುತ್ತಿದ್ದಾರೆ' ಎಂದರು.

`ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಯಾರ‌್ಯಾರು ಮತ್ತು ಯಾವ್ಯಾವ ಪಕ್ಷದವರು ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ. ಈ ಕಾರಣದಿಂದಲೇ ಇತರ ಎಲ್ಲ ಪಕ್ಷಗಳಿಗಿಂತ ಸಿಪಿಎಂ ಮತ್ತು ಎಡಪಕ್ಷಗಳ ಬಗ್ಗೆ ಜನರು ಒಳ್ಳೆಯ ಅಭಿಪ್ರಾಯಗಳನ್ನು ಹೊಂದಿದ್ದಾರೆ' ಎಂದು ಅವರು ತಿಳಿಸಿದರು.

`ಬಹುತೇಕ ರಾಜಕೀಯ ಪಕ್ಷಗಳಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತವೆ. ಆದರೆ ನಮ್ಮ ಪಕ್ಷವಲ್ಲದೇ ಇತರ ಎಡಪಕ್ಷಗಳು ಜನರ ಬಳಿಯಿಂದಲೇ ನಿಧಿ ಸಂಗ್ರಹಿಸುತ್ತದೆ. ಜನರು ಮತ್ತು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ನಮಗೆ ಗೆಲುವು ದೊರೆಯಲಿದೆ ಎಂಬ ವಿಶ್ವಾಸವಿದೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT