ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಮಸ್ಯೆ ಪರಿಹಾರಕ್ಕೆ ಸೂಚನೆ

Last Updated 10 ಫೆಬ್ರುವರಿ 2012, 9:15 IST
ಅಕ್ಷರ ಗಾತ್ರ

ಗೌರಿಬಿದನೂರು: ಜನರು ಎದುರಿ ಸುತ್ತಿರುವ ಸಮಸ್ಯೆಗಳನ್ನು ಆದಷ್ಟು ಬೇಗನೇ ಪರಿಹರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ತೋರಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಗುರುವಾರ ನಡೆದ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಮಾತನಾಡಿ, `ಮೂಲಸೌಕರ್ಯಗಳನ್ನು ಪೂರೈಸುವ ಮತ್ತು ಅಗತ್ಯ ನೆರವು ನೀಡುವುದರ ಮೂಲಕ ಜನಸಾಮಾನ್ಯರ ಬೇಡಿಕೆ ಈಡೇರಿಸಬೇಕು~ ಎಂದರು.

`ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಾಸವಿರುವ ವಸತಿರಹಿತರಿಗೆ ನಿವೇಶನ ಒದಗಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು. ಆಯಾ ಗ್ರಾಮಸ್ಥರಿಗೆ ಹಕ್ಕುಪತ್ರ ಗಳನ್ನು ವಿತರಿಸುವ ಮೂಲಕ ಸಮಸ್ಯೆ ಗಳನ್ನು ಪರಿಹರಿಸಬೇಕು~ ಎಂದು ಅವರು ಸೂಚಿಸಿದರು.

ತಹಶೀಲ್ದಾರ್ ಡಾ. ಬಿ.ಸುಧಾ ಮಾತ ನಾಡಿ, `ತಾಲ್ಲೂಕಿನ ಡಿ.ಪಾಳ್ಯ, ಜಿ.ಬೊಮ್ಮಸಂದ್ರ, ದಿಮ್ಮಗಟ್ಟನಹಳ್ಳಿ, ಮಾಧವನಗರ ಗ್ರಾಮಗಳಲ್ಲಿ ವಸತಿ ಹೀನರ ಪಟ್ಟಿ ತಯಾರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು~ ಎಂದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರೆಡ್ಡಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜ್ಞಾನಿ ಪ್ರಶಸ್ತಿಗೆ ಅರ್ಜಿ
ಚಿಕ್ಕಬಳ್ಳಾಪುರ: ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾ ಟಕ ರಾಜ್ಯ ವಿಜ್ಞಾನ ಪರಿಷತ್ ಅರ್ಜಿ ಆಹ್ವಾನಿಸಿದೆ.

ವಿಜ್ಞಾನ ಕಾರ್ಯಕ್ರಮ ಮತ್ತು ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಶಿಷ್ಟ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.

ನಿಗದಿತ ಅರ್ಜಿ ನಮೂನೆಯನ್ನು ವಿದ್ಯಾರ್ಥಿಗಳು ಮುಖ್ಯೋಪಾಧ್ಯಾ ಯರು ಅಥವಾ ಪ್ರಾಂಶುಪಾಲರ ಮೂಲಕ ಅರ್ಜಿ ಸಲ್ಲಿಸಬಹುದು.

2009 ರಿಂದ 2012ರ ಅವಧಿಯಲ್ಲಿ ನಡೆದ ಮಕ್ಕಳ ವಿಜ್ಞಾನ ಗೋಷ್ಠಿ, ಪ್ರತಿಭಾ ಕಾರಂಜಿ, ವಿಜ್ಞಾನ ನಾಟಕ ಸ್ಪರ್ಧೆ, ವಿಜ್ಞಾನ ಸಮಾವೇಶ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಶಸ್ತಿ ಗಳಿಸಿರಬೇಕು.

ಅರ್ಜಿದಾರರ ವಯೋ ಮಿತಿ 18 ಮೀರಿರಬಾರದು. ಅರ್ಜಿ ಸಲ್ಲಿಕೆಗೆ ಫೆ.20 ಕೊನೆ ದಿನ. ವಿವರ ಗಳಿಗೆ-ಕಾರ್ಯದರ್ಶಿ, ಯುವ ವಿಜ್ಞಾನಿ ಪ್ರಶಸ್ತಿ ಯೋಜನೆ-2011-2012, ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ.24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70. ದೂ.080-2671 8939.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT