ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಮಸ್ಯೆಗೆ ಸ್ಪಂದಿಸದ ಸರ್ಕಾರ

Last Updated 9 ಏಪ್ರಿಲ್ 2011, 19:30 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರವು ಜನರನ್ನು ವಂಚಿಸುತ್ತಿದ್ದು ಭ್ರಷ್ಟಾಚಾರ, ಭೂಹಗರಣಗಳಲ್ಲಿ ಮುಳುಗಿದೆ. ಹೀಗಿದ್ದರೂ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಿಲ್ಲ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಸಿಪಿಎಂ ಮತ್ತು ಸಾಮೂಹಿಕ ಸಂಘಟನೆಗಳು ಕೈಗೊಂಡಿರುವ ಜನಜಾಗೃತಿ ಜಾಥಾ ಅಂಗವಾಗಿ ಶನಿವಾರ ಶಿಡ್ಲಘಟ್ಟ ಬಸ್ ನಿಲ್ದಾಣದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬೆಲೆ ಏರಿಕೆ, ತೆರಿಗೆ ಹೆಚ್ಚಳ, ವಿದೇಶಿ ಬಂಡವಾಳ ಹೂಡಿಕೆ ಇತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಕಾರಣವಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲೆಂದೇ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದರು.

ವಿದ್ಯುತ್ ದರ ಏರಿಕೆ, ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳು ಮತ್ತು ರೈತರು ತೊಂದರೆ ಎದುರಿಸುತ್ತಿದ್ದಾರೆ. ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು, ಮಹಿಳೆಯರು, ದಲಿತರ, ವಿದ್ಯಾರ್ಥಿ, ಯುವಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ವಿವಿಧ ಸಂಘಟನೆ ಮುಖಂಡರಾದ ಬಿ.ಎನ್.ಮುನಿಕೃಷ್ಣಪ್ಪ, ಮಧುಲತಾ, ಲಕ್ಷ್ಮಿದೇವಮ್ಮ, ಮುನೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT