ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಲೋಕಪಾಲ್ ಮಸೂದೆ: ಜನದನಿ ಆಗ್ರಹ

Last Updated 9 ಏಪ್ರಿಲ್ 2011, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು:  ಜನಲೋಕಪಾಲ್ ಮಸೂದೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳಿಸ ಬೇಕೆಂದು ಒತ್ತಾಯಿಸಿ ಜನದನಿ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಮಾನವ ಸರಪಳಿ ನಿರ್ಮಿಸಿ, ಸಹಿ ಸಂಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜನದನಿ ಸಂಘಟನೆ ಮತ್ತಿತರೆ ಸಂಘಟನೆಗಳ ಮುಖಂಡರು ಭ್ರಷ್ಟಾಚಾರ ವಿರೋಧಿಸಿ ಆಜಾದ್ ವೃತ್ತದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು. ವಕೀಲ ಡಿ.ದ್ರುವ ನಾರಾಯಣ ಸಹಿ ಸಂಗ್ರಹಕ್ಕೆ ಚಾಲನೆ ನೀಡಿದರು.

‘ಭ್ರಷ್ಟಾಚಾರದಲ್ಲಿ ಭಾಗಿಯಾಗು ವುದಿಲ್ಲ, ಅದನ್ನು ನೋಡಿ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ, ಭ್ರಷ್ಟಾಚಾರ ವಿರುದ್ಧ ಧ್ವನಿ ಎತ್ತುತ್ತೇವೆ’ ಎಂಬ ಪ್ರತಿಜ್ಞೆಯನ್ನೂ ಇದೇ ವೇಳೆ ಸ್ವೀಕರಿಸಲಾಯಿತು. ನಂತರ, ಸಹಿ ಸಂಗ್ರಹಿಸಿದ್ದ ಬ್ಯಾನರ್ ಮತ್ತು ಬೇಡಿಕೆ ಮನವಿ ಪತ್ರವನ್ನು ಪ್ರಧಾನಿಗೆ ಕಳುಹಿಸಿಕೊಡಲು ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪಗೌಡ ಅವರಿಗೆ ಸಲ್ಲಿಸಲಾಯಿತು.

ಭ್ರಷ್ಟಾಚಾರಕ್ಕೆ ಮೂಲವಾಗಿರುವ ಚುನಾವಣಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರಬೇಕು. ಜನಲೋಕಪಾಲ್ ಮಸೂದೆಗೆ ಹೆಚ್ಚಿನ ಅಧಿಕಾರ ನೀಡುವುದರ ಜತೆಗೇ ರಾಜ್ಯದಲ್ಲಿ ಲೋಕಾಯುಕ್ತಕ್ಕೂ ಹೆಚ್ಚಿನ ಅಧಿಕಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಒತ್ತಾಯಿಸಿದವು.

ಜನದನಿ ಸಂಘಟನೆ ಸಂಚಾಲಕ ಬಿ.ಅಮ್ಜದ್, ರವೀಶ್ ಬಸಪ್ಪ, ಗುರುಶಾಂತಪ್ಪ, ಶಿವಾನಂದ ಸ್ವಾಮಿ, ಬಿಎಸ್‌ಪಿ ಜಿಲ್ಲಾ ಘಟಕ ಅಧ್ಯಕ್ಷ ರಾಧಾಕೃಷ್ಣ, ಜನತಾದಳ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಸಿಪಿಐ ರಾಜ್ಯ ಸಹ ಕಾರ್ಯದರ್ಶಿ ಪಿ.ವಿ.ಲೋಕೇಶ್ ಸಹಿ ಸಂಗ್ರಹ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT