ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆ ಹೆಚ್ಚಳದಿಂದ ವನ್ಯಜೀವಿಗಳಿಗೆ ಆಪತ್ತು

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಜನಸಂಖ್ಯೆ, ತಂತ್ರಜ್ಞಾನ ಹೆಚ್ಚಾದಂತೆಲ್ಲಾ ಅರಣ್ಯ, ಅರಣ್ಯ ಜೀವಿಗಳು ಅವನತಿಯತ್ತ ಸಾಗುತ್ತಿವೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸದಸ್ಯ ಕಾರ್ಯದರ್ಶಿ ಡಾ.ಎಚ್. ಹೊನ್ನೇಗೌಡ ವಿಷಾದ ವ್ಯಕ್ತಪಡಿಸಿದರು.

ನಗರದ ಸಹ್ಯಾದ್ರಿ ಕಾಲೇಜಿನ ಸಿ.ಎನ್.ಆರ್. ರಾವ್ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ, ಪರಿಸರ ವಿಜ್ಞಾನ ಕಾಲೇಜು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ `ವಿಶ್ವ ವನ್ಯಜೀವಿ ದಿನಾಚರಣೆ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಅಧ್ಯಕ್ಷ ಸಿ.ಎ. ರಾಜಶೇಖರ್ ಮಾತನಾಡಿದರು.

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಬಿ.ಎಚ್. ರಾಘವೇಂದ್ರ, ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಆರ್. ಸಿದ್ದರಾಮಪ್ಪ, ಪರಿಸರ ವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಪರಿಸರ ನಾಗರಾಜ, ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕವಲಗೋಡು ಕೆ. ವೆಂಕಟೇಶ್, ವಿಜ್ಞಾನ ಪರಿಷತ್ತು ಸಂಚಾಲಕ ಡಾ.ಶೇಖರ್ ಗೌಳೇರ್, ಡಾ.ನಿತಿನ್ ರಾಯ್, ಎಚ್. ಪ್ರದೀಪ್ ಕುಮಾರ್, ಆಯನೂರು ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT