ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸ್ನೇಹಿಗಳಾಗಿ: ವೈದ್ಯರಿಗೆ ಕಿವಿಮಾತು

Last Updated 22 ಜುಲೈ 2013, 19:28 IST
ಅಕ್ಷರ ಗಾತ್ರ

ಕೃಷ್ಣರಾಜಪುರ:  `ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳ ಸಮಸ್ಯೆಗೆ ಸ್ಪಂದಿಸಲು ವೈದ್ಯರು ಜನಸ್ನೇಹಿ ಗಳಾಗಬೇಕು' ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಕಿವಿಮಾತು ಹೇಳಿದರು.

ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, `ನಿಜವಾದ ಅರ್ಹರು, ಬಡವರು, ನಿರ್ಗತಿಕರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಸೇರಿದಂತೆ ಇಲ್ಲ ರೀತಿಯ ನೆರವುಗಳನ್ನು ವೈದ್ಯರು ನೀಡಬೇಕು' ಎಂದು ಅವರು ಸೂಚಿಸಿದರು.

ಶಾಸಕ ಬೈರತಿ ಎ.ಬಸವರಾಜು, `ಎರಡೂ ಕ್ಷೇತ್ರಗಳ ವ್ಯಾಪ್ತಿಗೆ ಆಸ್ಪತ್ರೆ ಸೇರಿದೆ. ಹಾಗಾಗಿ 150 ಹಾಸಿಗೆಗೆ ವಿಸ್ತರಿಸಬೇಕು. ತುರ್ತು ಚಿಕಿತ್ಸಾ ಘಟಕ, ತೀವ್ರ ನಿಗಾ ಘಟಕಗಳನ್ನು ನಿರ್ಮಿಸ ಬೇಕು' ಎಂದು ಆಗ್ರಹಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ರಜನಿ, ಆಡಳಿತ ವೈದ್ಯಾಧಿಕಾರಿ ಶಿವಪ್ರಕಾಶ್, ತಾಲ್ಲೂಕು ವೈದ್ಯಾಧಿಕಾರಿ ಚಂದ್ರಶೇಖರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT