ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾರ್ದನ ರೆಡ್ಡಿ ನ್ಯಾಯಾಂಗ ಬಂಧನ ವಿಸ್ತರಣೆ

Last Updated 18 ಜೂನ್ 2012, 8:30 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಸೇರಿದಂತೆ ನಾಲ್ವರ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ ಸಿಬಿಐ ನ್ಯಾಯಾಲಯವು  ಜುಲೈ 2 ರವರೆಗೆ ವಿಸ್ತರಿಸಿತು.

ಜನಾರ್ದನ ರೆಡ್ಡಿ ಸೇರಿದಂತೆ ಇತರೆ ನಾಲ್ವರ ಹೆಚ್ಚಿನ ವಿಚಾರಣೆಯ ಅಗತ್ಯವಿದೆ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ. ಅಂಗಡಿ ಅವರು ಅವರು ಜನಾರ್ದನ ರೆಡ್ಡಿ ಹಾಗೂ ಮೆಹಫಜ್ ಅಲಿಖಾನ್ ಸೇರಿದಂತೆ ಇತರೆ ಮೂವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ, ಆದೇಶ ಹೊರಡಿಸಿದರು.

ರೆಡ್ಡಿ ಪ್ರಸ್ತುತ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT