ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರಕ್ಕೆ ರೂ 1,248 ಕೋಟಿ

Last Updated 21 ಜುಲೈ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ 1,248 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಜಮ್ಮು ಕಾಶ್ಮೀರದಲ್ಲಿರುವ ರಸ್ತೆ ಸಂಪರ್ಕ ಹೊಂದಿರದ ಪ್ರದೇಶದ ಆರ್ಥಿಕ ಅಭಿವೃದ್ಧಿ ಮತ್ತು ಅಲ್ಲಿನ ನಿವಾಸಿಗಳ ಕಲ್ಯಾಣಕ್ಕೆ ನೆರವಾಗುವ ಉದ್ದೇಶ ಕೇಂದ್ರದ ಈ ನಿರ್ಧಾರದ ಹಿಂದಿದೆ.

`ಭಾರತ ನಿರ್ಮಾಣ ಯೋಜನೆಯ 8ನೇ ಹಂತ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಸಂಪರ್ಕ ಮತ್ತು ದೀರ್ಘಾವಧಿ ಬಾಳುವಂತಹ ಸೇತುವೆಗಳ ನಿರ್ಮಾಣಕ್ಕಾಗಿ 1,248.15 ಕೋಟಿ ರೂ ನೆರವನ್ನು ನೀಡುವ ಪ್ರಸ್ತಾವಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಅನುಮೋದನೆ ನೀಡಿದೆ~ ಎಂದು ಸಚಿವಾಲಯದ ವಕ್ತಾರರೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT