ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಲಲಿತಾ ಪ್ರಕರಣ: ಸೆ.14ಕ್ಕೆ ಮುಂದೂಡಿಕೆ

Last Updated 6 ಸೆಪ್ಟೆಂಬರ್ 2011, 10:00 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಇಲ್ಲಿನ ವಿಶೇಷ ನ್ಯಾಯಾಲಯವು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸೆ. 14ಕ್ಕೆ ಮುಂದೂಡಿದೆ.

ಈ ಪ್ರಕರಣದ ವಿಚಾರಣೆಯಲ್ಲಿ ಜಯಲಲಿತಾ ಅವರ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾದ ಅರ್ಜಿಯ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿದ್ದ  ನ್ಯಾಯಪೀಠ ಅದನ್ನು ಸೆ. 12ಕ್ಕೆ ಮುಂದೂಡಿತ್ತು.

ಮಂಗಳವಾರ ಇಲ್ಲಿಯ ವಿಶೇಷ ನ್ಯಾಯಾಲಯದಲ್ಲಿ  ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದ ಕುರಿತು ವಿಚಾರಣೆ ಆರಂಭವಾದಾಗ, ಜಯಲಲಿತಾ ಅವರ ವಕೀಲ ಎ. ಕಂದಸಾಮಿ ಅವರು,  ಸುಪ್ರೀಂ ಕೋರ್ಟ್ ನಲ್ಲಿ ಖುದ್ದು ಹಾಜರಿ ವಿನಾಯಿತಿಯ ಕುರಿತು ವಿಚಾರಣೆ ನಡೆಯುತ್ತಿದ್ದು,  ಸೆ 12 ರಂದು ತೀರ್ಮಾನ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿ, ಸಿಆರ್‌ಪಿಸಿ ಸೆಕ್ಷನ್ 309ರ ಅಡಿಯಲ್ಲಿ ಅರ್ಜಿ ಸಲ್ಲಿಸಿ ಎರಡು ವಾರಗಳ ಕಾಲ ಇಲ್ಲಿನ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡರು.

ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಅರ್ಜಿದಾರರ ಪರ ವಕೀಲರ ವಿಶೇಷ ಮನವಿಗೆ ಸಹಾಯಕ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೇಶ್ ಚೌತ ಅವರು ಸಮ್ಮತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT