ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ತಾಪಮಾನ ಹೆಚ್ಚಳ: ಸಿಇಒ ಆತಂಕ

Last Updated 3 ಏಪ್ರಿಲ್ 2013, 9:16 IST
ಅಕ್ಷರ ಗಾತ್ರ

ಮಂಡ್ಯ: ಇಂದಿನ ಯುವಜನಾಂಗಕ್ಕೆ ಪರಿಸರದ ಮಹತ್ವ ತಿಳಿದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳೂ ನಡೆಯುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಸಿ.ಜಯಣ್ಣ ವಿಷಾದಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಂಯುಕ್ತಾಶ್ರದಯಲ್ಲಿ ಮಂಗಳವಾರ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದದ ಜಿಲ್ಲಾಮಟ್ಟದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಪರಿಸರ ರಕ್ಷಣೆ ಬಗೆಗೆ ಚಿಂತನೆ ನಡೆಯುತ್ತಿಲ್ಲ. ಗಿಡಗಳು ಬೆಳೆದು ನಿಂತಿರುವ ಜಾಗಗಳಲ್ಲಿ ಊರುಗಳು ತಲೆ ಎತ್ತುತ್ತಿವೆ. ಅಪರೂಪದ ಸಸ್ಯ ಸಂಪತ್ತು ಕಾಣೆಯಾಗುತ್ತಿದೆ. ನಿಸರ್ಗದ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಸ್ತೆ ಬದಿಯಲ್ಲಿ ಗಿಡಗಳನ್ನು ಬೆಳೆವು ಜವಾಬ್ದಾರಿಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು. ಜೀವತಾವಧಿಯಲ್ಲಿ 10 ಗಿಡಗಳನ್ನು ನೆಟ್ಟು, ಬೆಳೆಸಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಪರಿಸರ ರಕ್ಷಣೆಗೆ ಜತೆಗೆ ನೀರಿನ ಸಂಗ್ರಹ, ನಿರ್ವಹಣೆಗೂ ಹೆಚ್ಚಿನ ಒತ್ತು ನೀಡಬೇಕಿದೆ. ಹೊಸ ಕೆರೆಗಳ ನಿರ್ಮಾಣ ಹಾಗೂ ಈಗಿರುವ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿವಮೊಗ್ಗ ಪರಿಸರ ಅಧ್ಯಯನ ಕೇಂದ್ರದ ನಿರ್ದೇಶಕ ಜಿ.ಎಲ್.ಜನಾರ್ಧನ, ಮೈಸೂರಿನ ಹಿರಿಯ ಪರಿಸರ ಅಧಿಕಾರಿ ಎಂ.ಲಕ್ಷ್ಮಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಡಿ.ಶಿವಕುಮಾರ್, ಡಯಟ್ ಉಪನಿರ್ದೇಶಕಿ ವಿ. ಸುಮಗಳ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವರುದ್ರಪ್ಪ, ಸಂಪನ್ಮೂಲ ವ್ಯಕ್ತಿ ನ.ಲಿ. ಕೃಷ್ಣ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಯೋಗೇಶ್, ಪರಿಸರ ಅಧಿಕಾರಿ ಬಿ.ಪಿ. ಗೀತಾ ಇದ್ದರು.
ಸಮಯ ಸದ್ಬಳಕೆಗೆ ಸಲಹೆ

ಕೃಷ್ಣರಾಜಪೇಟೆ: ಮನುಷ್ಯ ತನ್ನ ಬಿಡುವಿನ ವೇಳೆಯನ್ನು ಸಂಗೀತ ಆಸ್ವಾದ, ಸಜ್ಜನರ ಒಡನಾಟ, ಉತ್ತಮ ಪುಸ್ತಕಗಳ ಓದು ಮತ್ತಿತರ ಯೋಗ್ಯ ಚಟುವಟಿಕೆಗಳಿಗೆ ಉಪಯೋಗಿಸಿದರೆ ಮಾನಸಿಕವಾಗಿ ಆರೋಗ್ಯವಂತನಾಗಿ ಇರಲು ಸಹಾಯವಾಗುತ್ತದೆ ಎಂದು ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಸ್ವತಂತ್ರ ಬಸವಲಿಂಗ ಶಿವಯೋಗಿಗಳು ತಿಳಿಸಿದರು.

ತಾಲ್ಲೂಕು ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಪಟ್ಟಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಲಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಸೋಮಶೇಖರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅ.ಮ.ಶ್ಯಾಮೇಶ್, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾರೇನಹಳ್ಳಿ ಲೋಕೇಶ್, ಅಕ್ಕಮಹಾದೇವಿ ಮಹಿಳಾ ಮಂಡಲಿ ಅಧ್ಯಕ್ಷೆ ಉಷಾರಾಜ್ ಇದ್ದರು.

ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಸಂಗೀತ ಕಲಾ ತಂಡದ ಶ್ರೀಕಾಂತ್ ಚಿಮಲ್ ಮತ್ತು ಸಂಗಡಿಗರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT