ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಉತ್ಸವಕ್ಕೆ ಚಾಲನೆ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಗಜೇಂದ್ರಗಡ: ಬಸವಣ್ಣರ ಕಾಲದ ಕೃತಿಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 60 ಲಕ್ಷ ರೂಪಾಯಿ ಅನುದಾನದಲ್ಲಿ ವಿಶೇಷ ಯೋಜನೆಯೊಂದನ್ನು ಹಮ್ಮಿಕೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಪಟ್ಟಣದ ಎಪಿಎಂಸಿ ಎದುರಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ `ಜಾನಪದ ಉತ್ಸವ~ ವನ್ನು ಉದ್ಘಾಟಿಸಿ  ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸದ್ಯ ಪೇಶ್ವೆ ಆಡಳಿತಾವಧಿಯಲ್ಲಿನ ಮೂಡಿ ಲಿಪಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಳಕಪ್ಪ ಬಂಡಿ ಅಧ್ಯಕ್ಷತೆ ವಹಿಸಿದ್ದರು. ಗದಗ ಜಿ.ಪಂ. ಅಧ್ಯಕ್ಷೆ ಬಸವರಾಜೇಶ್ವರಿ ಪಾಟೀಲ, ಸದಸ್ಯರಾದ ರಮೇಶ ಮುಂದಿನಮನಿ, ಎಂ.ಎಸ್. ದೊಡ್ಡಗೌಡರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಕರೀಗೌಡರ, ಪ್ರಧಾನ ಕಾರ್ಯದರ್ಶಿ  ಬಿ.ಎಂ. ಸಜ್ಜನರ ಹಾಗೂ ಇತರರು ಪಾಲ್ಗೊಂಡಿದ್ದರು.  ನಂತರ `ಜೈ ಹೋ~ ಖ್ಯಾತಿಯ ವಿಜಯ್ ಪ್ರಕಾಶ್ ಹಾಗೂ ಗಾಯಕಿ ಅನುರಾಧ ಭಟ್ ಅವರು ನಡೆಸಿಕೊಟ್ಟ ಕಾರ್ಯಕ್ರಮ ಮನ ಸೂರೆಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT