ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಲೋಕೋತ್ಸವ

Last Updated 9 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಜಾನಪದ ಲೋಕೋತ್ಸವ ಸಮಾರಂಭವನ್ನು ಫೆಬ್ರುವರಿ 11 ರಿಂದ 12 ರ ವರೆಗೆ ರಾಮನಗರ ಜಿಲ್ಲೆಯ ಜಾನಪದ ಲೋಕದಲ್ಲಿ ಏರ್ಪಡಿಸಲಾಗಿದೆ~ ಎಂದು ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಪ್ರತಿ ವರ್ಷ ಫೆಬ್ರುವರಿ ತಿಂಗಳಿನಲ್ಲಿ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಜನಪದ ಕಲಾವಿದರ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಈ ಲೋಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ~ ಎಂದರು.

`ಈ ವರ್ಷದ ಲೋಕೋತ್ಸವದಲ್ಲಿ ಜಾನಪದ ಕಲಾವಿದರುಗಳಿಗೆ ನೀಡುತ್ತಿರುವ ಪ್ರಶಸ್ತಿ ಮೊತ್ತವನ್ನು ಕ್ರಮವಾಗಿ 10.000 ರೂ ಮತ್ತು 5,000 ರೂ ಗಳಿಗೆ ಹೆಚ್ಚಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ ಒಬ್ಬರಿಗೆ ಈ ವರ್ಷದಿಂದ ಹೊಸದಾಗಿ `ಜಾನಪದ ಲೋಕಶ್ರೀ~ ಪ್ರಶಸ್ತಿ ನೀಡಲು ನಿಶ್ಚಯಿಸಲಾಗಿದೆ~ ಎಂದು ಮಾಹಿತಿ ನೀಡಿದರು.

 ಎರಡೂ ದಿನಗಳು ರಾಜ್ಯ ಮತ್ತು ಹೊರರಾಜ್ಯಗಳ ಕಲಾವಿದರುಗಳಿಂದ ವೈವಿಧ್ಯಮಯ ಕಲಾಪ್ರದರ್ಶನ ನಡೆಯಲಿದೆ ಎಂದು ತಿಮ್ಮೇಗೌಡ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT