ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ಪ್ರಣವ್ ಬೆಂಬಲಿಸಿದ ಬಿಜೆಪಿ ಮಿತ್ರಪಕ್ಷಗಳು

Last Updated 17 ಜುಲೈ 2012, 19:30 IST
ಅಕ್ಷರ ಗಾತ್ರ

ರಾಂಚಿ (ಐಎಎನ್‌ಎಸ್): ಜಾರ್ಖಂಡ್‌ನಲ್ಲಿ ಆಡಳಿತಾರೂಢ ಬಿಜೆಪಿಯ ಮೂರು ಮಿತ್ರಪಕ್ಷಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಪ್ರಣವ್ ಮುಖರ್ಜಿ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿವೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಅಖಿಲ ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ (ಎಜೆಎಸ್‌ಯು) ಪ್ರಣವ್ ಅವರನ್ನು ಬೆಂಬಲಿಸಲು ನಿರ್ಧರಿಸಿವೆ. ಜೊತೆಗೆ ಜಾರ್ಖಂಡ್‌ನ ಅಬಕಾರಿ ಸಚಿವರೂ ಸೇರಿದಂತೆ ಇಬ್ಬರು ಜೆಡಿಯು ಶಾಸಕರು ಯುಪಿಎ ಅಭ್ಯರ್ಥಿಗೆ ಬೆಂಬಲ ಸೂಚಿಸಲು ಕಳೆದ ವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಜಾರ್ಖಂಡ್ ಶಾಸನಸಭೆಯಲ್ಲಿ ಜೆಎಂಎಂ 18 ಶಾಸಕರನ್ನು ಮತ್ತು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತಲಾ ಒಬ್ಬರು ಸದಸ್ಯರನ್ನು ಹೊಂದಿದೆ. ಎಜೆಎಸ್‌ಯ ಆರು ಶಾಸಕರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT