ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ:ಆರ್‌ಬಿಐ ಆತಂಕ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ದೇಶದ ಆರ್ಥಿಕ ವೃದ್ಧಿ ದರವು ಈ ಮೊದಲಿನ ನಿರೀಕ್ಷೆಗಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ. ದೇಶಿ ಮತ್ತು ಜಾಗತಿಕ ವಿದ್ಯಮಾನಗಳು ಅಭಿವೃದ್ಧಿಗೆ ಪೂರಕವಾಗಿಲ್ಲ. ಹೀಗಾಗಿ ವೃದ್ಧಿ ದರವು ಈ ಮೊದಲಿನ ಅಂದಾಜು ಶೇ 7.6ರಷ್ಟು ಸಾಧ್ಯವಾಗಲಿಕ್ಕಿಲ್ಲ ಎಂದು `ಆರ್‌ಬಿಐ~, ಸೋಮವಾರ ಇಲ್ಲಿ ಬಿಡುಗಡೆ ಮಾಡಿರುವ `ಆರ್ಥಿಕತೆ ಮತ್ತು ಹಣಕಾಸು ಅಭಿವೃದ್ಧಿ~ಗೆ ಸಂಬಂಧಿಸಿದ ಸಮೀಕ್ಷೆಯಲ್ಲಿ ಅಭಿಪ್ರಾಯಪಟ್ಟಿದೆ.

ಕೇಂದ್ರೀಯ ಬ್ಯಾಂಕ್ ತನ್ನ ಹಣಕಾಸು ನೀತಿಯ ತೃತೀಯ ತ್ರೈಮಾಸಿಕದ ಪರಾಮರ್ಶೆ ನಡೆಸುವ ಒಂದು ದಿನ ಮುಂಚೆ ಈ ಸಮೀಕ್ಷೆಯ ವಿವರಗಳನ್ನು ಪ್ರಕಟಿಸಲಾಗಿದೆ. ಹಣದುಬ್ಬರ ಪರಿಸ್ಥಿತಿಯಲ್ಲಿ ಸುಧಾರಣೆಯಾದಂತೆಲ್ಲ ಬಡ್ಡಿ ದರಗಳು ಕಡಿಮೆಯಾಗುವ ಸಾಧ್ಯತೆಗಳಿವೆ.  ಸದ್ಯಕ್ಕೆ ಹಣದುಬ್ಬರ ದರ ಕಡಿಮೆ ಆಗುತ್ತಿರುವುದರಿಂದ ಅಭಿವೃದ್ಧಿಗೆ ಒತ್ತು ನೀಡುವುದರತ್ತ `ಆರ್‌ಬಿಐ~ ಈಗ ತನ್ನ ಗಮನ ಕೇಂದ್ರೀಕರಿಸಲಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT