ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲಾನಿ: ಹೊಸ ವಿದೇಶಾಂಗ ಕಾರ್ಯದರ್ಶಿ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಹಣಕಾಸು ನೆರವನ್ನು ನೀಡಿದ್ದ ಆರೋಪದ ಮೇಲೆ 2003ರಲ್ಲಿ ಭಾರತದಿಂದ ಹೊರ ಹಾಕಲಾಗಿದ್ದ ಪಾಕಿಸ್ತಾನದ ರಾಜತಾಂತ್ರಿಕ ಜಲೀಲ್ ಅಬ್ಬಾಸ್ ಜಿಲಾನಿ ಅವರನ್ನು ಪಾಕ್‌ನ ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ಹೇಳಿವೆ.

ಈಗ ವಿದೇಶಾಂಗ ಕಾರ್ಯದರ್ಶಿಯಾಗಿರುವ ಸಲ್ಮಾನ್ ಬಶೀರ್ ಮಾರ್ಚ್ 3ರಂದು ನಿವೃತ್ತರಾಗಲಿದ್ದು ಅವರನ್ನು ಭಾರತದ ಹೊಸ ಹೈ ಕಮಿಶನರ್ ಆಗಿ ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
ಜಿಲಾನಿ ಪ್ರಧಾನಿ ಗಿಲಾನಿ ಅವರ ಸೋದರ ಸಂಬಂಧಿ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT