ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ: ಚಂದ್ರಾ ನಾಯ್ಕ ಎಚ್ಚರಿಕೆ

Last Updated 7 ಅಕ್ಟೋಬರ್ 2011, 10:10 IST
ಅಕ್ಷರ ಗಾತ್ರ

ಹೂವಿನಹಡಗಲಿ: ಹಡಗಲಿಯನ್ನು ಬರಗಾಲ ಪೀಡಿತ ತಾಲ್ಲೂಕು ಎಂದು ಒಂದು ವಾರದಲ್ಲಿ ಘೋಷಣೆ ಮಾಡದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಶಾಸಕ ಚಂದ್ರಾ ನಾಯ್ಕ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ತಾಲ್ಲೂಕಿನಾದ್ಯಂತ ಮುಂಗಾರು ಸಂಪೂರ್ಣ ವಿಫಲವಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ ನಮ್ಮ ತಾಲ್ಲೂಕನ್ನು ಬರಗಾಲ ಪೀಡಿತ ಪಟ್ಟಿಗೆ ಸೇರಿಸದೆ ಅನ್ಯಾಯ ಮಾಡ ಲಾಗಿದೆ ರೈತ ಸಮುದಾಯವನ್ನು ಕರೆದುಕೊಂಡು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಅವರು ಹೇಳಿದರು.

ಈ ತಾಲ್ಲೂಕು ಬರ ಪೀಡಿತ ತಾಲ್ಲೂಕುಗಳ ಪಟ್ಟಿ ಯಿಂದ ತಪ್ಪಿ ಹೋಗಲು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಕಾರಣ ಎಂದು ಅವರು ಹೇಳಿದರು.

ಜಿಲ್ಲಾ ಸಚಿವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆ ಅನಾಥವಾಗಿದೆ ಅಧಿಕಾರಿಗಳು ತಮಗೆ ತಿಳಿದಂತೆ ವರ್ತಿಸುತ್ತಿದ್ದಾರೆ ಸಂಬಂಧಿಸಿದ ಸಚಿವರ ಬಳಿ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳು ವುದಾಗಿ ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲೆಗೆ ಒಮ್ಮೆಯಾದರೂ ಬಂದಿಲ್ಲ. ನೆರೆಯ ಜಿಲ್ಲೆ ಎಂಬ ಮುಜುಗರ ಅವರಿಗೆ ಜಿಲ್ಲೆಯಲ್ಲಿನ ಶಾಸಕರನ್ನೇ ಜಿಲ್ಲಾ ಉಸ್ತುವಾರಿ ಗಳನ್ನಾಗಿ ಮಾಡಿದರೆ ಅಭಿವೃದ್ಧಿಗೆ ಅನುಕೂಲ ಆಗುತ್ತದೆ ಎಂದರು.

ಜಿಲ್ಲಾಧಿಕಾರಿಗಳು ನಾಲ್ಕಾರು ತಿಂಗಳಾದರೂ ಒಮ್ಮೆಯೂ ಬಾರದೆ ಅಲ್ಲಿಯೇ ಕುಳಿತು ಅಧಿಕಾರಿ ಮಾಡುತ್ತಿದ್ದಾರೆ ಎಂದು ದೂರಿದರು. ಸಂಕಷ್ಟದಲ್ಲಿ ಇರುವ ರೈತರ ಪರವಾಗಿ ಯೋಚನೆ ಮಾಡಿ ಅವರಿಗಾದ ಅನ್ಯಾಯವನ್ನು ಸರಿಪಡಿಸಲು ಮುಂದಾಗಬೇಕು ಎಂದಿದ್ದಾರೆ. ಜಿ.ಪಂ.ಸದಸ್ಯ ಬಿ.ತೋಟಾ ನಾಯ್ಕ, ಮುಖಂಡರಾದ ಎಂ.ಬಿ. ಬಸವರಾಜ, ಕೋಟೆಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT