ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿಯಾಗಿ ಶಿಖಾ ಅಧಿಕಾರ ಸ್ವೀಕಾರ

Last Updated 19 ಜುಲೈ 2013, 9:40 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಸಿ. ಶಿಖಾ ಗುರುವಾರ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯಕ್ ಅಧಿಕಾರ ವಹಿಸಿಕೊಟ್ಟರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲ ಕಾಲ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾ, ಪ್ರಸ್ತುತ ಶ್ರೀಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಜಿಲ್ಲಾಧಿಕಾರಿಯಾಗಿದ್ದ ಡಾ.ರಾಮೇಗೌಡ ಅವರು ಬೆಂಗಳೂರಿನ ಜಲಸಂಪನ್ಮೂಲ ಮಂಡಳಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಬುಧವಾರ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ಶಿಖಾ ಬಂದಿದ್ದಾರೆ. ದಸರಾಗೆ ಸಿದ್ಧತೆ: `ನಾಡಹಬ್ಬ ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳ ಲಾಗುವುದು. ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಶಿಖಾ ತಿಳಿಸಿದರು.

ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, `ದಸರಾ ಪ್ರಾಧಿಕಾರ ರಚಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರ' ಎಂದರು.

`ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಸಂರಕ್ಷಣೆ ಮತ್ತು ಮಿತ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು' ಎಂದರು.

`ಜಿಲ್ಲೆಯಲ್ಲಿ ಡೆಂಗೆ ಇನ್ನೂ ಹಿಡಿತಕ್ಕೆ ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ರೋಗವನ್ನು ಸಂಪೂರ್ಣ ಹತೋಟಿಗೆ ತರಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಡೆಂಗೆ ಬಗ್ಗೆ ಅರಿವು ಮೂಡಿಸಲಾಗುವುದು. ಪೋನ್-ಇನ್ ಕಾರ್ಯಕ್ರಮ ಮುಂದುವರಿಸಲಾಗುವುದು. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪ ವಿಭಾಗಾಧಿಕಾರಿ ಬಸವರಾಜು ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT