ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ವಿವಿಧೆಡೆ ಮಳೆ: ರೈತರ ಸಂತಸ

ಪ್ರಜಾವಾಣಿ ವಾರ್ತೆ
Last Updated 6 ಸೆಪ್ಟೆಂಬರ್ 2013, 5:57 IST
ಅಕ್ಷರ ಗಾತ್ರ

ಮಂಡ್ಯ: ಮಂಡ್ಯವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಮಳೆಯಾಗಿದೆ. ನಗರದಲ್ಲಿ ಸಂಜೆ 4 ಗಂಟೆಯ ಸುಮಾರಿಗೆ ಆರಂಭವಾದ ಮಳೆಯೂ ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಬಂದಿತು.

ವಿ.ವಿ. ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ನೀರು ಜಾಸ್ತಿ ಇದ್ದದ್ದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಕಚೇರಿಗಳಿಂದ ಮನೆಗೆ ತೆರಳುವವರೂ ಪರದಾಡಬೇಕಾಯಿತು. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ ಉತ್ತಮ ಮಳೆಯಾ ಗಿರುವುದು ರೈತರಲ್ಲಿ ಸಂತಸ ಉಂಟು ಮಾಡಿದೆ.

ಮಳೆ: ವಿದ್ಯುತ್ ವ್ಯತ್ಯಯ
ಮಳವಳ್ಳಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಇದರಿಂದ ಪಟ್ಟಣದಲ್ಲಿ ದಿನಪೂರ್ತಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಕೆಲವು ದಿನಗಳಿಂದ ಹಗಲು ವೇಳೆಯೆ ಹೆಚ್ಚಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಒಮ್ಮಮ್ಮೆ ಗಂಟೆಗೆ ಹತ್ತು ಬಾರಿಯಾದರೂ ವಿದ್ಯುತ್ ಕಡಿತಗೊಳ್ಳುತ್ತದೆ. ಜೊತೆಗೆ ಕೆಲವು ಬಡಾವಣೆಗಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ವಿದ್ಯುತ್ ಪೂರೈಕೆ ಇರುವುದಿಲ್ಲ. ಇದರಿಂದ ಕುಡಿಯುವ ನೀರಿಗೂ ಪರದಾಡುವಂತಾಗುತ್ತದೆ. ಇದರ ಬಗ್ಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿದರೆ ಯಾವ ಅಧಿಕಾರಿಯೂ ಕರೆ ಸ್ವೀಕರಿಸುವುದಿಲ್ಲ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT