ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಬಂಡಿ

Last Updated 17 ಡಿಸೆಂಬರ್ 2012, 6:24 IST
ಅಕ್ಷರ ಗಾತ್ರ

ಗಜೇಂದ್ರಗಡ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದರೆ, ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಭೂಮಿಯ ಕೊರತೆ ತೀವ್ರವಾಗಿದೆ. ಉದಾರಿಗಳು ಸರ್ಕಾರ ನಿಗದಿಪಡಿಸುವ ದರಕ್ಕೆ ಜಮೀನು ನೀಡುವ ಮೂಲಕ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ನಬಾರ್ಡ್ ಆರ್.ವೈ.ಡಿ.ಎಫ್-17ರ ಯೋಜನೆ ಯಡಿಯಲ್ಲಿ 60 ಲಕ್ಷ ವೆಚ್ಚದ ನೆಲ್ಲೂರ-ಪ್ಯಾಟಿಯಿಂದ ಕೊಡತಗೇರಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇತ್ತೀಚಿನ ಕೆಲ ವರ್ಷಗಳಲ್ಲಿ ಜಿಲ್ಲೆಯ ಭೂಮಿಗೆ ಚಿನ್ನದ ಬೆಲೆ ಬಂದಿದೆ.

ಹೀಗಾಗಿ ರೈತರು ಸರ್ಕಾರ ನಿಗದಿಪಡಿಸುವ ದರಕ್ಕೆ ಜಮೀನು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಜಮೀನಿನ ಕೊರತೆ ತೀವ್ರವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲೆಯ ಶೇ.92 ರಷ್ಟು ರಸ್ತೆಗಳು ವ್ಯವಸ್ಥಿತ ರೀತಿಯಲ್ಲಿ ನಿರ್ಮಾಣಗೊಂಡಿವೆ. ಇನ್ನೂ ಶೇ.8 ರಷ್ಟು ರಸ್ತೆಗಳು ನಿರ್ಮಾಣವಾಗಬೇಕಿದೆ ಎಂದರು.   ಗದಗ- ಗಜೇಂದ್ರಗಡ-ಇಲಕಲ್ ರಸ್ತೆ ನಿರ್ಮಾಣಕ್ಕೆ 200 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಜಿ.ಪಂ. ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾ.ಪಂ ಅಧ್ಯಕ್ಷೆ ಲಲಿತಾ ಪೂಜಾರ, ಗ್ರಾ.ಪಂ ಅಧ್ಯಕ್ಷೆ ಗೀತಾಬಾಯಿ ಕುಲಕರ್ಣಿ, ಚಂದಪ್ಪ ಗುಡದೂರ, ಬಸವರಾಜ ಅಂಗಡಿ, ರಾಚನಗೌಡ ಗೌಡರ, ಜಿ.ಪಂ ಸಹಾಯಕ ಎಂಜಿನಿಯರ್ ವಿ.ಕೆ.ಕಾಳಪ್ಪನವರ, ಕಿರಿಯ ಎಂಜಿನಿಯರ್ ಎಸ್. ಎಂ.ದ್ಯಾಮಣ್ಣವರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT