ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಉತ್ತಮ ಹೆಸರು'

Last Updated 5 ಡಿಸೆಂಬರ್ 2012, 8:11 IST
ಅಕ್ಷರ ಗಾತ್ರ

ಯಲ್ಲಾಪುರ: `ಸಹಕಾರಿ ಕ್ಷೇತ್ರದಲ್ಲಿ ಜಿಲ್ಲೆಯ ಹಿರಿಯರು ವಹಿಸಿದ ಶ್ರಮದಿಂದಾಗಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಂಗಳವಾರ ಉಮ್ಮಚಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಾರ್ಯಾಲಯ ಕಟ್ಟಡ ಹಾಗೂ ಎಪಿಎಂಸಿ ಗೋದಾಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಸರ್ಕಾರ ಸೌಹಾರ್ದ ಕಾಯ್ದೆ, ವೈದ್ಯನಾಥನ್ ವರದಿ ಅನುಷ್ಠಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಯತ್ನಿಸುತ್ತಿದೆ' ಎಂದು ಹೇಳಿದ ಅವರು, ಅಸಾಮಿ ಸಾಲ ಮನ್ನಾ ಮಾಡಬೇಕೆಂಬ  ಹೋರಾಟಕ್ಕೆ ಜಯ ಸಿಗುವ ಭರವಸೆಯಿದೆ ಎಂದರು.

ಭದ್ರತಾ ಕೊಠಡಿ ಉದ್ಘಾಟಿಸಿದ ಮಾಜಿ ಸಚಿವ ಆರ್.ವಿ.ದೇಶಪಾಂಡೆ, `ಅಗತ್ಯವಿದ್ದಲ್ಲಿ ಮಾತ್ರ ಸಾಲ ಪಡೆಯುವ ಹಾಗೂ ಪ್ರತಿಯೊಬ್ಬರಲ್ಲಿ ಉಳಿತಾಯ ಮಾಡುವ ಮನೋಭಾವನೆ ಜಾಗ್ರತವಾದಲ್ಲಿ ದೇಶದ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯ' ಎಂದರು.
ಟಿಎಸ್‌ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಜವಳಿ ವಿಭಾಗವನ್ನು ಶಾಸಕ ವಿ.ಎಸ್.ಪಾಟೀಲ ಉದ್ಘಾಟಿಸಿದರು.

ಟಿಎಂಎಸ್ ಅಧ್ಯಕ್ಷ ಆರ್.ಎನ್.ಹೆಗಡೆ ಗೋರ್ಸಗದ್ದೆ, ಎಪಿಎಂಸಿ ಅಧ್ಯಕ್ಷ ರಾಮಚಂದ್ರ ಮುದ್ದೆಪಾಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎನ್.ಪಿ.ಗಾಂವ್ಕರ, ಜಿ.ಟಿ.ಹೆಗಡೆ ತಟ್ಟಿಸರ, ಟಿಎಸ್‌ಎಸ್ ನಿರ್ದೇಶಕ ಎನ್.ಎಸ್.ಹೆಗಡೆ ಕುಂದರಗಿ, ಉಮ್ಮಚಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟು ಗಿರಿಯ ಗೌಡ, ಕಳಚೆ ಸಹ್ಯಾದ್ರಿ ಬ್ಯಾಂಕ್ ಅಧ್ಯಕ್ಷ ಉಮೇಶ ಭಾಗ್ವತ, ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ, ಸಹಕಾರಿ ಸಂಘಗಳ ಉಪನಿಬಂಧಕ ಐ.ಎಸ್.ಗಿರಡ್ಡಿ, ಸಹಾಯಕ ನಿಬಂಧಕ ಎಸ್.ಬಿ ಆಗೇರ, ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಿರಿಯ ಸದಸ್ಯರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಾಧಿಕಾ ಹೆಗಡೆ ಪ್ರಾರ್ಥನೆ ಹಾಡಿದರು. ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ ಸ್ವಾಗತಿಸಿದರು. ಗಣೇಶ ಭಟ್ಟ ನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಕ ಡಿ.ಎಸ್.ಭಟ್ಟ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT