ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 1, 2 ಅಹೋರಾತ್ರಿ ಧರಣಿ: ಸಿಎನ್‌ಸಿ

Last Updated 17 ಜೂನ್ 2011, 7:00 IST
ಅಕ್ಷರ ಗಾತ್ರ

ಮಡಿಕೇರಿ: ಕೊಡವ ಲ್ಯಾಂಡ್ ಸ್ವಾಯತ್ತತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಮಸೂದೆ ಮಂಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸರ್ಕಾರವನ್ನು  ಒತ್ತಾಯಿಸಿದ್ದು, ಈ ಸಂಬಂಧ ಜುಲೈ 1 ಮತ್ತು 2ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಎನ್‌ಸಿ ಅಧ್ಯಕ್ಷ ನಂದಿನೆರವಂಡ ನಾಚಪ್ಪ, `ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್ ಸ್ವಾಯತ್ತ ಮಂಡಳಿಯನ್ನು ಸಂವಿಧಾನದ 6ನೇ ಶೆಡ್ಯೂಲ್ ಪ್ರಕಾರ ರಚಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತೀಚೆಗೆ ಸಹಿ ಹಾಕಿರುವಂತೆ ರಾಜ್ಯದ ಬಿಜೆಪಿ ಸರ್ಕಾರ ಕೊಡವ ಲ್ಯಾಂಡ್ ಸ್ವಾಯತ್ತತೆಗೆ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.

`ಗೂರ್ಖಾಲ್ಯಾಂಡ್ ಜೊತೆಗೆ ಆಂಧ್ರ ಪ್ರದೇಶದ ತೆಲಂಗಾಣ ಪ್ರದೇಶಕ್ಕೂ ಸ್ವಾಯತ್ತತೆ ನೀಡುವ ಕುರಿತು ಕೇಂದ್ರ ಸರ್ಕಾರ ಆಲೋಚನೆ ನಡೆಸುತ್ತಿದೆ. ಇದೇ ರೀತಿಯಾಗಿ ಕೊಡವ ಲ್ಯಾಂಡ್‌ಗೂ ಸ್ವಾಯತ್ತತೆ ನೀಡಬೇಕು~ ಎಂದು ಆಗ್ರಹಿಸಿದರು.

`ಸ್ವಾಯತ್ತತೆಗೆ ಆಗ್ರಹಿಸಿ ಕಳೆದ ಎರಡು ದಶಕಗಳಿಂದ ಸಿಎನ್‌ಸಿ ಶಾಂತಿಯುತ ಹೋರಾಟ ನಡೆಸಿಕೊಂಡು ಬರುತ್ತಿದೆ. ಮಾನವ ಸರಪಳಿ ಹಾಗೂ ವಾಹನ ಜಾಥಾ ಇತ್ಯಾದಿಗಳ ಮೂಲಕ ಕೊಡವರ ವೇದನೆ, ಸಂವೇದನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ~ ಎಂದರು.

`ನಮ್ಮ ಶಾಂತಿಯುತ ಹೋರಾಟವನ್ನು ದೌರ್ಬಲ್ಯವೆಂದು ಪರಿಗಣಿಸಬಾರದು~ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

`ತಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ಪ್ರಧಾನಿ, ಗೃಹಸಚಿವರು, ಕಾನೂನು ಸಚಿವರು ಹಾಗೂ ಲೋಕಸಭೆಯ ಸ್ಪೀಕರ್ ಮತ್ತಿತರರಿಗೆ ಮನವಿಯನ್ನು ಕಳುಹಿಸಲಾಗಿದೆ~ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಲಿಯಂಡ ಪ್ರಕಾಶ್, ಮೂಕೊಂಡ ದಿಲೀಪ್, ಚೆಂಬಾಂಡ ಜನತ್, ಅಪ್ಪಚ್ಚೀರ ರಮ್ಮಿ ನಾಣಯ್ಯ, ಅಜ್ಜಿಕುಟ್ಟೀರ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT