ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ತೊರೆದ ಮುನಿಕೃಷ್ಣ

Last Updated 12 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಜಾತ್ಯತೀತ ಜನತಾದಳದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ. ಮುನಿಕೃಷ್ಣ ಅವರು ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಬೇಸತ್ತು, ತಮ್ಮ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಮುನಿಕೃಷ್ಣ, `ಒಂದೂವರೆ ವರ್ಷದ ಹಿಂದೆ ಬಿಜೆಪಿಯಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಜೆಡಿಎಸ್‌ನ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದರು. ಇದೀಗ ಜೆಡಿಎಸ್ ಟಿಕೆಟ್ ಅನ್ನು ಅಬ್ದುಲ್ ಹಜೀಂ ಅವರಿಗೆ ನೀಡಲಾಗಿದೆ. ಇದರಿಂದ ನೊಂದು ಜೆಡಿಎಸ್‌ಗೆ ರಾಜೀನಾಮೆ ನೀಡಿ, ಹೆಬ್ಬಾಳ ಕ್ಷೇತ್ರದಲ್ಲಿ ಕೆಜೆಪಿಯಿಂದ ಸ್ಪರ್ಧಿಸುತ್ತಿದ್ದೇನೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT