ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಯು ಅಧ್ಯಕ್ಷರಾಗಿ 3ನೇ ಬಾರಿಗೆ ಶರದ್ ಯಾದವ್ ಮುಂದುವರಿಕೆ?

Last Updated 9 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜೆಡಿಯು ಅಧ್ಯಕ್ಷರಾಗಿ ಶರದ್ ಯಾದವ್ ಅವರು ಸತತ ಮೂರನೇ ಬಾರಿಗೆ ಗದ್ದುಗೆ ಏರಲು ವೇದಿಕೆ ಸಿದ್ಧವಾಗಿದೆ.

ಏ.14ರಂದು ನಡೆಯಲಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಶರದ್ ಏಕಮೇವ ಅಭ್ಯರ್ಥಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷ ಗಾದಿಯಲ್ಲೇ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಹಿರಿಯ ಮುಖಂಡರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ ಶರದ್ ಯಾದವ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಹಿಂಪಡೆಯಲು ಏ.13 ಕಡೆಯ ದಿನವಾಗಿದೆ.

ಜಾರ್ಜ್ ಫರ್ನಾಂಡೀಸ್ ಅವರ ನಂತರ ಜೆಡಿಯು ಅಧ್ಯಕ್ಷರಾಗಿ ಶರದ್ ಯಾದವ್ ಎರಡು ಬಾರಿ ಆಯ್ಕೆಯಾಗಿದ್ದರು.

ಪಕ್ಷದ ಸಂವಿಧಾನದ ಪ್ರಕಾರ, ಯಾವುದೇ ವ್ಯಕ್ತಿ ಎರಡು ಬಾರಿ ಅಧ್ಯಕ್ಷಗಿರಿ ಅಲಂಕರಿಸಬಹುದು. ಆದರೆ ಅಗತ್ಯವಿದ್ದಲ್ಲಿ ತಿದ್ದುಪಡಿ ಮೂಲಕ ಅವಧಿ ವಿಸ್ತರಿಸುವ ಅಧಿಕಾರ ಪಕ್ಷದ ಅಧ್ಯಕ್ಷರಿಗಿರುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2014ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್ಚು ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಜತೆಗಿನ ಸಖ್ಯ ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ಜಿಜ್ಞಾಸೆಯೂ ಮಿತ್ರಪಕ್ಷ ಜೆಡಿಯುನಲ್ಲಿ ತಲೆದೋರಿದೆ. ಹೀಗಾಗಿ ಶರದ್ ಯಾದವ್ ಅವರ ಮುಂದುವರಿಕೆ ತೀವ್ರ ಕುತೂಹಲ ಕೆರಳಿಸಿದೆ. ಏ.13 ಹಾಗೂ 14ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯು ನೂತನ ಅಧ್ಯಕ್ಷರ ನೇಮಕಕ್ಕೆ ಮುದ್ರೆ ಒತ್ತಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT