ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ ನಗರದಲ್ಲಿ ಕಣ್ಣಿನ ಆಸ್ಪತ್ರೆ ನಿರ್ಮಾಣ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಪಶ್ಚಿಮ ಲಯನ್ಸ್ ಸಂಸ್ಥೆಯು ಜೆ.ಪಿ.ನಗರದಲ್ಲಿ  ವಿದ್ಯಾಸಾಗರ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯನ್ನು ಆರಂಭಿಸಲಿದೆ.

ಆಸ್ಪತ್ರೆಯಲ್ಲಿ ಮಧುಮೇಹ ಅಂಧತ್ವ ತಪಾಸಣೆ ಹಾಗೂ ಚಿಕಿತ್ಸೆ­ಯನ್ನು ಉಚಿತವಾಗಿ ನೀಡಲಾಗು­ವುದು. ಸಂಶೋಧನೆಗೂ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ಅಂತರ­ರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಬ್ಯಾರಿ ಜೆ.ಪಾಮರ್ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು  ₨60 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ­ಯನ್ನು ನಿರ್ಮಾಣ ಮಾಡಲಾಗು­ವುದು ಎಂದು ಹೇಳಿದರು.

ಮಧುಮೇಹದಿಂದ ಅಂಧತ್ವ ಪ್ರಕರಣ­ಗಳು ಹೆಚ್ಚಾಗುತ್ತಿವೆ. ಜನರಲ್ಲಿ ನೇತ್ರ ಆರೈಕೆಯ  ಬಗ್ಗೆ ಜಾಗೃತಿ ಮೂಡಿ­ಸಲು ನೆರವಾಗುವಂತೆ ಆಸ್ಪತ್ರೆಯು ಕಾರ್ಯನಿರ್ವಹಿಸಲಿದೆ ಎಂದರು.

ಪಿ.ಎಸ್.ಪ್ರೇಮನಾಥ್, ‘ಲಯನ್ಸ್ ಕ್ಲಬ್ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಾದ ದೊಡ್ಡಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಐದು ಕಡೆಗಳಲ್ಲಿ ಮಧುಮೇಹಿ ಕಣ್ಣಿನ ಆಸ್ಪತ್ರೆಗಳನ್ನು ತೆರೆಯಲು ಚಿಂತನೆ ನಡೆಸಿದೆ’ ಎಂದು ಮಾಹಿತಿ  ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT