ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ.ನಗರ: ಕುಡಿಯುವ ನೀರಿಗೆ ಆಹಾಕಾರ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಯನಗರ 5ನೇ ಬ್ಲಾಕ್‌ನ 9ನೇ ಮುಖ್ಯ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಗಾಗಿ ಕುಡಿಯುವ ನೀರಿನ ಕೊಳವೆಗಳನ್ನು ಕಾರ್ಮಿಕರು ಒಡೆದು ಹಾಕಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಈ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಾಗರಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. 

`ಕಾಮಗಾರಿಯಿಂದ ಎದುರಾಗಿರುವ ಸಮಸ್ಯೆ ಬಗ್ಗೆ ಸ್ಥಳೀಯರು ಗುತ್ತಿಗೆದಾರರ ಗಮನಕ್ಕೆ ತಂದರೂ ಈವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಲಮಂಡಳಿಯ ಎಂಜಿನಿಯರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ~ ಎಂದು ಸ್ಥಳೀಯ ದೀಪಕ್ ಬೆಳ್ಳೂರು ಆರೋಪಿಸಿದರು.

`ಮೂರು ವಾರಗಳ ಹಿಂದೆ ಜಲಮಂಡಳಿಯು ಕಾಮಗಾರಿ ಆರಂಭಿಸಿದ ದಿನದಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಕೊಳಚೆ ನೀರು ತುಂಬಿ ಹರಿಯುತ್ತಿರುವುದರಿಂದ ಸ್ಥಳೀಯ ಸಮಸ್ಯೆಯಾಗಿದೆ~ ಎಂದು ದೂರಿದರು.  

  ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೀವ್ ಪ್ರತಿಕ್ರಿಯಿಸಿ, `ಮ್ಯಾನ್‌ಹೋಲ್ ನಿರ್ಮಾಣ ಮಾಡಲು ಉದ್ದೇಶಿಸಿದ್ದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಸರಿಪಡಿಸಲಾಗುವುದು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT