ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಪಿಸಿಯಿಂದ ಶೀಘ್ರ ಮಾರನ್ ವಿಚಾರಣೆ

Last Updated 4 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್) : 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಭಾಗಿಯಾದ ಆರೋಪಕ್ಕೆ ಸಿಲುಕಿರುವ ಕೇಂದ್ರ ಸಚಿವ ದಯಾನಿಧಿ ಮಾರನ್ ಅವರನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶೀಘ್ರ ವಿಚಾರಣೆಗೆ ಒಳಪಡಿಸಲಿದೆ ಎಂದು ಸಮಿತಿ ಅಧ್ಯಕ್ಷ ಪಿ.ಸಿ. ಚಾಕೊ ತಿಳಿಸಿದ್ದಾರೆ.

 `ಮಾರನ್ ಅವರು ದೂರಸಂಪರ್ಕ ಇಲಾಖೆಯ ಸಚಿವರಾಗಿದ್ದ ಸಂದರ್ಭದಲ್ಲಿ ಕೈಗೊಳ್ಳಲಾದ ಯೋಜನೆಗಳು ಮತ್ತು ತೀರ್ಮಾನಗಳ ಬಗ್ಗೆ ಎಲ್ಲಾ ದಾಖಲೆಗಳನ್ನು ನೀಡುವಂತೆ ದೂರಸಂಪರ್ಕ ಇಲಾಖೆಗೆ ಸೂಚಿಸಲಾಗಿದೆ.  ಅವರನ್ನು ಸಮಿತಿ ಮುಂದೆ ಹಾಜರಾಗುವಂತೆ ಸೂಚಿಸಲಾಗುವುದು. ಅಲ್ಲದೆ ದೂರಸಂಪರ್ಕ ಇಲಾಖೆಯ ಎಲ್ಲಾ ಮಾಜಿ ಸಚಿವರು, ಕಾರ್ಯದರ್ಶಿಗಳು ಮತ್ತು ಟ್ರಾಯ್‌ನ ಮಾಜಿ ಅಧ್ಯಕ್ಷರುಗಳನ್ನು ಸಹ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ನಿರ್ಧರಿಸಲಾಗಿದೆ~ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT