ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈನ್ ಆಸ್ಪತ್ರೆ: ಭುಜದ ಮೂಳೆಗೆ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಸಂತನಗರದಲ್ಲಿರುವ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಭುಜದ ಮೂಳೆಗೆ ಸಂಬಂಧಿಸಿದ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗವನ್ನು ಮಂಗವಾರ ಪ್ರಾರಂಭವಾಯಿತು. ಎಲ್ಲ ವಯೋಮಾನದವರಲ್ಲೂ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಭುಜದ ಮೂಳೆ ತೊಂದರೆಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಆಟ ಆಡುವಾಗ ಉಂಟಾದ ಗಾಯ, ಸಂಧಿವಾತಕ್ಕಾಗಿ ಭುಜದ ಕೀಲು ಜೋಡಣೆ, ಮಧುಮೇಹಿಗಳಲ್ಲಿರುವ ಭುಜದ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಈ ವಿಭಾಗದಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಆಂಥ್ರೋಸ್ಕೊಪಿಕ್ ತಂತ್ರಜ್ಞಾನ ಬಳಸಿ ಜೀವಕೋಶಗಳಿಗೆ ಹಾನಿಯಾಗದಂತೆ ಭುಜದ ಕೀಲು ಜೋಡಣೆ ಶಸ್ತ್ರಚಿಕಿತ್ಸೆಯನ್ನು ನಡೆಸುವ ಸೌಕರ್ಯ ಕೂಡ ವಿಭಾಗದಲ್ಲಿದೆ.

ಹೆಚ್ಚಿನ ಮಾಹಿತಿಗೆ ಡಾ. ಹೇಮಂತ ಕುಮಾರ್ ರೆಡ್ಡಿ ಅವರನ್ನು ಈ ವಿಳಾಸದಲ್ಲಿ ಸಂಪರ್ಕಿಸಬಹುದು. ವಿಳಾಸ: ವಿಭಾಗದ ಮುಖ್ಯಸ್ಥರು, ಭುಜದ ಆರ್ಥೋಸ್ಕೊಪಿಕ್ ಶಸ್ತ್ರಚಿಕಿತ್ಸಾ ವಿಭಾಗ, ಭಗವಾನ್ ಮಹಾವೀರ ಜೈನ್ ಆಸ್ಪತ್ರೆ, ಮಿಲ್ಲರ್ಸ್‌ ರಸ್ತೆ, ವಸಂತನಗರ. ಮೊಬೈಲ್: 96868 00666.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT