ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲುಶಿಕ್ಷೆ: ಎತ್ತಿಹಿಡಿದ ಹೈಕೋರ್ಟ್

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದ 35 ವರ್ಷದ ಯುವಕನಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ ಐದು ವರ್ಷಗಳ ಜೈಲುಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿದೆ.

ತನ್ನ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯು ತಾನು ಮಾಡಿದ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಕೋಪಗೊಂಡ ವಿಜಯ್ ಚವಾಣ ಎಂಬಾತನು, ಆಕೆಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ.

ಅದೃಷ್ಟವಶಾತ್ ಯುವತಿ ಪ್ರಾಣಪಾಯದಿಂದ ಪಾರಾಗಿದ್ದಳು. 2009ರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣಾ ಹಂತದ ನ್ಯಾಯಾಲಯ ಆರೋಪಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದ.

ಆರೋಪಿಯ ಮನವಿಯನ್ನು ತಳ್ಳಿಹಾಕಿದ ಹೈಕೋರ್ಟ್, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT