ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈವಿಕ ಇಂಧನ ಬೆಳೆಗೆ ಉತ್ತಮ ಬೆಲೆ

Last Updated 12 ಆಗಸ್ಟ್ 2012, 19:20 IST
ಅಕ್ಷರ ಗಾತ್ರ

ಬೆಂಗಳೂರು: `ಜೈವಿಕ ಇಂಧನ ಬೆಳೆಯನ್ನು ಬೆಳೆದ ರೈತನಿಗೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆಸಿಗಲಿದೆ~ ಎಂದು ಗಾಂಧಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ ಹೇಳಿದರು.

ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಭಾನುವಾರ ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಿದ್ದ ರೈತರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

`ಜನರಲ್ಲಿ ಆಸಕ್ತಿ ಇದೆ~
`ಅಡಿಗೆ ತ್ಯಾಜ್ಯದಿಂದ ಜೈವಿಕ ಅನಿಲದ ಉತ್ಪಾದನೆ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ. ಜನರು ಆಸಕ್ತಿಯಿಂದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಪ್ರಾತ್ಯಕ್ಷಿಕೆ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ~
-ಶ್ಯಾಮ್‌ಸುಂದರ್
ಮೈಸೂರು ಜಿಲ್ಲಾ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕಾ ಕೇಂದ್ರದ ಸಂಯೋಜಕ


`ವಿಚಾರ ವಿನಿಮಯ ಆಗಿದೆ~
`ಹೊಂಗೆ ಬೀಜದಿಂದ ಡೀಸೆಲ್ ತಯಾರಿಕೆ ಏನೋ ಹೊಸದು ಎಂಬ ಭಾವನೆಯಿದೆ. ಅದರ ಬಗ್ಗೆ ಬಂದ ಜನರೆಲ್ಲ ಹಲವಾರು ಪ್ರಶ್ನೆಗಳನ್ನು ಆಸಕ್ತಿಯಿಂದ ಕೇಳಿದ್ದಾರೆ. ಮುಖ್ಯವಾಗಿ ಇಲ್ಲಿ ವಿಚಾರ ವಿನಿಮಯವಾಗಿದೆ. ಜನರ ಸ್ಪಂದನೆ ಚೆನ್ನಾಗಿದೆ. ಜೈವಿಕ ಇಂಧನದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದಂತಾಗಿದೆ~
-ಸತ್ಯನಾರಾಯಣ
ಮಲೆನಾಡು ಎಕ್ಸಟ್ರ್ಯಾಕ್ಷನ್ ಇಂಡಸ್ಟ್ರಿ

 

`ರೈತರಿಗೆ ಉತ್ತಮ ಗುಣಮಟ್ಟದ ಸಸಿಗಳನ್ನು ಮಂಡಳಿ ಒದಗಿಸಿ, ಜೈವಿಕ ಇಂಧನ ಬೆಳೆಗಳನ್ನು ಪೂರ್ಣ ಪ್ರಮಾಣದಲ್ಲಿ ಬೆಳೆಯಲು ಸಾಧ್ಯವೆ ಎಂಬ ಬಗ್ಗೆ ಮಂಡಳಿ ಚಿಂತನೆ ಮಾಡಬೇಕು~ ಎಂದು ಅವರು ತಿಳಿಸಿದರು.

ಮಂಡಳಿಯ ಕಾರ್ಯಕಾರಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ಮಾತನಾಡಿ, `ಜೈವಿಕ ಇಂಧನ ಬೆಳೆಯನ್ನು ಉದ್ಯೋಗ ಖಾತರಿ ಯೋಜನೆಯ ಭಾಗವಾಗಿ ಉಪಯೋಗಿಸಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ.

ಇದರಿಂದಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ರೂ 50 ಲಕ್ಷ ದಿಂದ ಒಂದು ಕೋಟಿ ಅನುದಾನ ಸಿಗಲಿದೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜೈವಿಕ ಇಂಧನ ಕಾರ್ಯಕ್ರಮವನ್ನು ಕಡ್ಡಾಯವಾಗಿ ಮಾಡಲು ಸೂಚಿಸಲಾಗುವುದು~ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಬಿಜಾಪುರ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಧಾರವಾಡ ಮತ್ತಿತರ ಜಿಲ್ಲೆಗಳಿಂದ ರೈತರು ಆಗಮಿಸಿದ್ದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎ.ಕೆ.ಮೊನ್ನಪ್ಪ, ಮೈಸೂರು ಆಕಾಶವಾಣಿ (ಕೃಷಿ) ಪ್ರಸಾರ ನಿರ್ವಾಹಕ ಎನ್.ಕೇಶವಮೂರ್ತಿ, ಸಾವಯವ ಕೃಷಿ ಮಿಷನ್ ಅಧ್ಯಕ್ಷ ಡಾ.ಎ.ಎಸ್.ಆನಂದ್ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT