ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಗದ ಅಭಿವೃದ್ಧಿ ನಿರ್ಲಕ್ಷ್ಯ ಆರೋಪ

Last Updated 18 ಜನವರಿ 2012, 8:00 IST
ಅಕ್ಷರ ಗಾತ್ರ

ಕಾರ್ಗಲ್: ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಜೋಗ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯೂ ಆದ ಜಿಲ್ಲಾಧಿಕಾರಿ ಪೊನ್ನುರಾಜ್ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೀ.ನಾ. ಶ್ರೀನಿವಾಸ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 4 ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಸಭೆಯನ್ನು ನಡೆಸಿಲ್ಲ. ಇದರಿಂದ ಜೋಗ್‌ಫಾಲ್ಸ್ ಪ್ರದೇಶದಲ್ಲಿ ಶುದ್ಧವಾದ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಪ್ರಾಧಿಕಾರದ ವತಿಯಿಂದ ಕಟ್ಟಿರುವ ಕಾಂಪ್ಲೆಕ್ಸ್, ಅಲ್ಲಿರುವ ಶೌಚಾಲಯ, ಚರಂಡಿಗಳಲ್ಲಿ ದುರ್ವಾಸನೆ ಬೀರುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಬೃಂದಾವನ ಮಾದರಿಯ ಗಾರ್ಡನ್ ನಿರ್ಮಾಣಕ್ಕೆ ನೀಡಿದ ್ಙ 5 ಕೋಟಿ ಹಣ ಖರ್ಚಾಗಿಲ್ಲ. ್ಙ 1.20 ಕೋಟಿ ವೆಚ್ಚದ ಸಂಗೀತ ಕಾರಂಜಿ ಇನ್ನೂ ಆರಂಭವಾಗಿಲ್ಲ. ಜೋಗ್‌ಫಾಲ್ಸ್ ವ್ಯಾಪ್ತಿಯಲ್ಲಿ ನಡೆದ ಸುಮಾರು ್ಙ 8 ಕೋಟಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT