ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಷಿ ಸಂಗೀತ ವಿವಿಗೆ ಆಗ್ರಹ

Last Updated 25 ಜನವರಿ 2011, 19:30 IST
ಅಕ್ಷರ ಗಾತ್ರ

ಗದಗ: ಪಂ. ಭೀಮಸೇನ್ ಜೋಷಿ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ನಗರದಲ್ಲಿ ಸ್ಥಾಪನೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲು ಮಂಗಳವಾರ ನಗರಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಂಗೀತ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಮತ್ತು ನಗರಸಭೆಯ ಸರ್ವ ಸದಸ್ಯರ ನಿಯೋಗ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಅಲ್ಲದೆ ಜೋಷಿ ಹುಟ್ಟೂರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿರುವ ಹಿನ್ನೆಲೆಯಲ್ಲಿ, ನಗರಸಭೆಯು ಈ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ವಿಶ್ವಮಟ್ಟದಲ್ಲಿ ಭೀಮಸೇನ್ ಜೋಷಿಯವರ ಹೆಸರು ಶಾಶ್ವತವಾಗಿಸುವ ಕೆಲಸ ಕೈಗೊಳ್ಳಬೇಕು ಎಂದು ಸಹ ನಿರ್ಣಯ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT