ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನ ಸಮಾಜಮುಖಿಯಾಗಲಿ: ಡಾ.ಈಶ್ವರಪ್ಪ

Last Updated 12 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ದಾವಣಗೆರೆ: ಪ್ರತಿಭಾವಂತರು ತಮ್ಮ ಜ್ಞಾನವನ್ನು ಮಾನವೀಯ ನೆಲೆಯಲ್ಲಿ ಸಮಾಜಮುಖಿಯಾಗಿ ಬಳಸಬೇಕು. ಶಾಲಾಕಾಲೇಜುಗಳು ಆದರ್ಶ ಯುವ ಜನಾಂಗವನ್ನು ನಿರ್ಮಿಸುವ ಕೇಂದ್ರಗಳಾಗಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಸಲಹೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಶುಕ್ರವಾರ ಹಮ್ಮಿಕೊಂಡಿದ್ದ  ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಾಪಕ ವೃತ್ತಿ ಸವಾಲಿನ ಕೆಲಸ. ಬಿಸಿ ರಕ್ತದ ಯುವಕ- ಯುವತಿಯರನ್ನು ನಿಯಂತ್ರಿಸಿ, ಸೂಕ್ತ ಮಾರ್ಗದರ್ಶನ ತೋರುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ. ನಿರಂತರ ಅಧ್ಯಯನ ಹಾಗೂ ಕ್ರಿಯಾಶೀಲತೆ ಮೈಗೂಡಿಸಿಕೊಂಡರೆ ಮಾತ್ರ ಯಶಸ್ಸು ದೊರೆಯುತ್ತದೆ ಎಂದರು.

ಹಣಕಾಸಿನ ನಿರ್ವಹಣೆಗಿಂತ ಮಾನವ ಸಂಪನ್ಮೂಲ ಸದ್ಬಳಕೆ ಕಠಿಣ ಕೆಲಸ. ಶಿಕ್ಷಕರು ತಮ್ಮ ಕೆಲಸವನ್ನು ಸಾರ್ಥಕವಾಗಿ ನಿರ್ವಹಿಸಿದಾಗ ಮಾತ್ರ ನೈಜ ಪ್ರತಿಭೆ ಅರಳಲು ಸಾಧ್ಯ. ಅರಳಿದ ಪ್ರತಿಭೆ ಸ್ವಾರ್ಥ ತೊರೆದರೆ ಅದು ಸಮಾಜಕ್ಕೆ ಉಪಯುಕ್ತ ಎಂದು ಕಿವಿ ಮಾತು ಹೇಳಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರುದ್ರಮುನಿ, ಪ್ರಾಂಶುಪಾಲರ ಸಂಘದ ಜಿಲ್ಲಾ ಅಧ್ಯಕ್ಷ ರೇವಣಸಿದ್ದಪ್ಪ, ಭುವನೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT