ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಮಿನಲ್ ವಿಸ್ತರಣೆ ವರ್ಷದಲ್ಲಿ ಪೂರ್ಣ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ವರ್ಷ ಮಾರ್ಚ್ ವೇಳೆಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್) ಟರ್ಮಿನಲ್ ವಿಸ್ತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ  ಡಿ.ವಿ.ಸದಾನಂದ ಗೌಡ ತಿಳಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶನಿವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, `ಟರ್ಮಿನಲ್‌ನ ವಿಸ್ತರಣಾ ಕಾರ್ಯವನ್ನು 2013ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವ ಭರವಸೆ ಅಧಿಕಾರಿಗಳಿಂದ ದೊರೆತಿದೆ~ ಎಂದರು.

ಬಿಐಎಎಲ್ ಅಧಿಕಾರಿಗಳು ಈ ಕುರಿತು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು. ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡಿದ ಅವರು, ವಿಮಾನ ನಿಲ್ದಾಣದ ವಿಸ್ತರಣಾ ಕಾರ್ಯಕ್ಕೆ ಮುಂದಿನ ಬಜೆಟ್‌ನಲ್ಲಿ ಹಣ ಮೀಸಲಿಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

`ಟೋಲ್ ಸಂಗ್ರಹ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿಲ್ಲ. ಅದು ನಮಗೆ ಸಂಬಂಧಿಸಿದ ವಿಷಯವೂ ಅಲ್ಲ~ ಎಂದು ಬಿಐಎಎಲ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT