ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪರ್‌ ಡಿಕ್ಕಿ: ಬೈಕ್‌ ಸವಾರ ಸಾವು

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಟಿಪ್ಪರ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಗರದ ಕಂಠೀರವ ಸ್ಟುಡಿಯೊ ಬಳಿ ಮಂಗಳವಾರ ನಡೆದಿದೆ.

ಚಿಕ್ಕಮಗಳೂರು ಮೂಲದ ಮಹೇಶ್ವರಪ್ಪ (22) ಮೃತಪಟ್ಟವರು. ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೊರವರ್ತುಲ ರಸ್ತೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್‌ ಅವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಪ್ಪರ್‌ ಚಾಲಕ ಜಾನಿ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜಾಜಿನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT